ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರಿತ್ತಿದ್ದು ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ ಏಳು ರಂದು 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ.
ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರ ಗಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಲೋಕಸಭೆಯ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇ ಬೇಕೆಂದು ತೀರ್ಮಾನಿಸಿದ್ದು ಅದಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಭದ್ರಾವತಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆ.ಪಿ.ಸಿ.ಸಿ) ಸಂಯೋಜಕರಾಗಿ ರೇಖಾ ಶ್ರೀನಿವಾಸ್ ನೇಮಕ ಮಾಡಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾದ ರೇಖಾ ಶ್ರೀನಿವಾಸ್ ಅವರನ್ನು ಶಿವಮೊಗ್ಗ ಲೋಕಸಭೆಯ ಭಧ್ರಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಮುಳಗುಂದ (ಆಡಳಿತ ವಿಭಾಗ) ನೇಮಕಾತಿ ಆದೇಶ ಪತ್ರವನ್ನು ಹೊರಡಿಸಿದ್ದಾರೆ.
ಕೂಡಲೇ ಲೋಕಸಭಾ ಚುನಾವಣೆಯಲ್ಲಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ತಿಳಿಸಿದ್ದಾರೆ ಎಂದು ರೇಖಾ ಶ್ರೀನಿವಾಸ್ ಪತ್ರಿಕಾ ಪ್ರಕರಣದಲ್ಲಿ ತಿಳಿಸಿದ್ದಾರೆ.