ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳು ಮೇಲುಗೈ ಸಾಧಿಸುವ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿವೆ.
ನವೆಂಬರ್ 20ರಂದು ನಡೆದ ಮತದಾನದ ಮತ ಎಣಿಕೆ ಕಾರ್ಯ ಬಹುತೇಕ ಅಂತ್ಯಗೊಂಡಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಸಾರಥ್ಯದ ಮಿತ್ರ ಪಕ್ಷಗಳು 288 ಸ್ಥಾನಗಳ ಪೈಕಿ 221ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಭಾರೀ ಅಂತರದ ಗೆಲುವಿನೊಂದಿಗೆ ಅಧಿಕಾರ ಹಿಡಿಯುವ ಸೂಚನೆ ನೀಡಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಸೇರಿದಂತೆ ಪ್ರಮುಖರು ಮುನ್ನಡೆ ಸಾಧಿಸಿದ್ದಾರೆ.
ಜಾರ್ಖಂಡ್ ನಲ್ಲಿ 81 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 50 ಸ್ಥಾನಗಳಲ್ಲಿ ಮೇಲುಗೈ ಸಾಧಿಸುವ ಮೂಲಕ ಅಧಿಕಾರ ಹಿಡಿಯಲಿದೆ. ಎನ್ ಡಿಎ ನೇತೃತ್ವದ ಪ್ರತಿಪಕ್ಷಗಳು 29 ಸ್ಥಾನಗಳಲ್ಲಿ ಮುನ್ನಡೆ ಪಡೆದಿವೆ.