ಪ್ರಿಯಾಂಕಾ ಗಾಂಧಿ ಕೇರಳದ ವಯನಾಡಿನಲ್ಲಿ ಕನಿಷ್ಠ 4 ಲಕ್ಷ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ದಾಖಲೆ ಅಂತರದ ಗೆಲುವಿನೊಂದಿಗೆ ಮೊದಲ ಬಾರಿ ಸಂಸತ್ ಪ್ರವೇಶಿಸಲಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಟ್ಟುಕೊಟ್ಟ ವಯನಾಡು ಲೋಕಸಭಾ ಕ್ಷೇತ್ರಕ್ಕಾಗಿ ನಡೆದ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ 6 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದಿದ್ದೂ ಅಲ್ಲದೇ 4 ಲಕ್ಷ ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ.
ರಾಹುಲ್ ಗಾಂಧಿ 3.65 ಲಕ್ಷ ಮತಗಳ ಅಂತರದಿಂದ ಗೆದ್ದ ದಾಖಲೆಯನ್ನು ಪ್ರಿಯಾಂಕಾ ಗಾಂಧಿ ಮುರಿದು ಚೊಚ್ಚಲ ಸಾರ್ವತ್ರಿಕ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ.
ವಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ 2014 ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನದ ನಡುವೆಯೂ 6 ಲಕ್ಷಕ್ಕೂ ಅಧಿಕ ಮತ ಪಡೆದು, 3.65ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿ ದಾಖಲೆ ಬರೆದಿದ್ದರು.
ಪ್ರಿಯಾಂಕಾ ಗಾಂಧಿ 6.12 ಲಕ್ಷ ಮತಗಳನ್ನು ಪಡೆದಿದ್ದು, ಪ್ರತಿಸ್ಪರ್ಧಿ ಸಿಪಿಐನ ಸತ್ಯನ್ ಮೋರ್ಕಿ [2.07 ಲಕ್ಷ] ಅವರನ್ನು 4 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಿಜೆಪಿಯ ನವ್ಯಾ ಹರಿದಾಸ್ 10.8 ಲಕ್ಷ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದೂ ಅಲ್ಲದೇ ಠೇವಣಿಯನ್ನು ಕಳೆದುಕೊಂಡಿದ್ದಾರೆ.