Thursday, December 25, 2025
Google search engine
HomeಕಾನೂನುMuda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ

Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ

ಮೈಸೂರಿನ ಮುಡಾದಲ್ಲಿ ನಡೆದಿದೆ ಎನ್ನಲಾದ ಸೈಟು ಹಂಚಿಕೆ ಪ್ರಕರಣ ಸಿಬಿಐಗೆ ವಹಿಸುವ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರಕ್ಕೆ ಕಾಯ್ದಿರಿಸಿದೆ.

ಮುಡಾ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಸಮರ್ಪಕವಾಗಿ ನಡೆಸುತ್ತಿಲ್ಲ. ಆದ್ದರಿಂದ ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ತೀರ್ಪು ಪ್ರಕಟಿಸಲಿದೆ.

ಸಿಬಿಐಗೆ ಮುಡಾ ಪ್ರಕರಣದ ತನಿಖೆ ವಹಿಸಬೇಕು ಎಂಬ ಅರ್ಜಿಯನ್ನು ವಜಾಗೊಳಿಸಬೇಕು ಹಾಗೂ ಎಫ್ ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಕನಕಲಕ್ಷ್ಮೀ ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಮುಕ್ತಾಯಗೊಳಿರುವ ಹೈಕೋರ್ಟ್, ಪ್ರತಿವಾದಿಗಳಿಗೆ ಉತ್ತರ ನೀಡಲು ಕಾಲವಕಾಶ ನೀಡಿ ತೀರ್ಪನ್ನು ಕಾಯ್ದಿರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments