Sunday, May 31, 2026
Google search engine
Homeಕ್ರೀಡೆTest ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್

Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಕೆಲ ಸಮಯದ ಬಳಿಕ ಮತ್ತೆ ಅಗ್ರಸ್ಥಾನಕ್ಕೆ ಮರಳಿದ್ದಾರೆ.

ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಮತ್ತು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್ ವುಡ್ ಅವರನ್ನು ಹಿಂದಿಕ್ಕಿರುವ ಬೂಮ್ರಾ (993) ಎರಡು ಸ್ಥಾನಗಳ ಬಡ್ತಿ ಪಡೆದು ಅಗ್ರಸ್ಥಾನ ಅಲಂಕರಿಸಿದ್ದಾರೆ.

ಪರ್ತ್‌ನಲ್ಲಿ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಐದರ ಗೊಂಚಲು ಸೇರಿದಂತೆ ಒಟ್ಟು 8 ವಿಕೆಟ್‌ಗಳನ್ನು ಬೂಮ್ರಾ ಕಬಳಿಸಿದ್ದರು.

ಅಗ್ರ 10ರ ಪೈಕಿ ಅಶ್ವಿನ್ ಒಂದು ಸ್ಥಾನ ಬಡ್ತಿ ಪಡೆದು ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ಮೊಹಮ್ಮದ್ ಸಿರಾಜ್ ಮೂರು ಸ್ಥಾನಗಳ ಏರಿಕೆ ಕಂಡು, 25ನೇ ಸ್ಥಾನ ಗಳಿಸಿದ್ದಾರೆ. ಇದೇ ಪಂದ್ಯದಲ್ಲಿ ಸಿರಾಜ್ ಒಟ್ಟು 5 ವಿಕೆಟ್ ಗಳಿಸಿದ್ದರು.

ಟೆಸ್ಟ್ ಬ್ಯಾಟರ್‌ಗಳ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಯುವ ಪ್ರತಿಭಾವಂತ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಎರಡು ಸ್ಥಾನಗಳ ನೆಗೆತ ಕಂಡಿದ್ದು, ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಇಂಗ್ಲೆಂಡ್‌ನ ಜೋ ರೂಟ್ ಅಗ್ರಸ್ಥಾನ (903) ಕಾಯ್ದುಕೊಂಡಿದ್ದು, ಜೈಸ್ವಾಲ್ 825 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಪರ್ತ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸಲ್ಲಿ ಶೂನ್ಯಕ್ಕೆ ಔಟ್ ಆಗಿದ್ದ ಜೈಸ್ವಾಲ್ ಎರಡನೇ ಇನಿಂಗ್ಸಲ್ಲಿ ಅಮೋಘ ಶತಕದ (161) ಸಾಧನೆ ಮಾಡಿದ್ದರು. ಆ ಮೂಲಕ ಆಸ್ಟ್ರೇಲಿಯಾ ನೆಲದಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಶತಕ ಸಾಧನೆ ಮಾಡಿದ್ದರು.

ಪರ್ತ್ ಪಂದ್ಯದಲ್ಲೇ ಟೆಸ್ಟ್ ವೃತ್ತಿ ಜೀವನದ 30ನೇ ಶತಕ ಗಳಿಸಿರುವ ವಿರಾಟ್ ಕೊಹ್ಲಿ, 9 ಸ್ಥಾನಗಳ ಬಡ್ತಿ ಪಡೆದು 13ನೇ ಸ್ಥಾನಕ್ಕೆ ತಲುಪಿದ್ದಾರೆ. ಮತ್ತೊಂದೆಡೆ ರಿಷಭ್ ಪಂತ್ 6ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments