ಮಂಗಳೂರು: ಹಬ್ಬಕ್ಕೆ ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ ನೀರುಪಾಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬುವವರ ಮನೆಗೆ ವೇಣೂರು ಚರ್ಚ್ ವಾರ್ಷಿಕ ಹಬ್ಬಕ್ಕೆ ಬಂದಿದ್ದ ಕುಪ್ಪಪೆದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬುವವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
Law News ಬೆಂಗಳೂರಿನಲ್ಲಿ ಲಾಕಪ್ ಡೆತ್: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!
ಊಟ ಮುಗಿಸಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಬರ್ಕಜೆ ಡ್ಯಾಂ ಬಳಿಯ ಎರುಗುಂಡಿ ಬಳಿ ಸ್ನಾನ ಮಾಡಲು ನದಿಗೆ ಇಳಿದಿದ್ದು, ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯುವಕರು ಮಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.