ಮುಸ್ಲಿಮರಿಗೆ ಮತದಾನ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ್ ಸ್ವಾಮೀಜಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ವಿಶ್ವ ಒಕ್ಕಲಿಗ ಮಠದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು ಡಿಸೆಂಬರ್ ೨ರಂದು ಬೆಳಿಗ್ಗೆ ೧೧ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ನೀಡಿದ ಹೇಳಿಕೆ ಸಂವಿಧಾನ ವಿರೋಧಿ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು.