Wednesday, July 1, 2026
Google search engine
Homeರಾಜ್ಯಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: 7 ದಿನದಲ್ಲಿ ವರದಿ ನೀಡಲು ಸಿಎಂ ಸೂಚನೆ

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: 7 ದಿನದಲ್ಲಿ ವರದಿ ನೀಡಲು ಸಿಎಂ ಸೂಚನೆ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಕುರಿತು 7 ದಿನದಲ್ಲಿ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, 7 ದಿನದಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.

ಸೀಸೆರಿಯನ್ ವೇಳೆ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಆಸ್ಪತ್ರೆ ಎಂಡಿಗೆ ಪತ್ರ ಬರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಲದೇ ಕಂಪನಿಯಿಂದ ಕೂಡ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ನುಡಿದರು.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಅಸಹಜವಾಗಿ ಮೃತಪಟ್ಟಿದ್ದರು. ಸಾವಿಗೆ ಐವಿ ಗ್ಲೂಕೋಸ್ ಕಾರಣ ಎಂದು ಹೇಳಲಾಗಿತ್ತು. ಈ ಸಂಬಂಧ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಗಳ ಸಭೆ ನಡೆಸಲಾಯಿತು.

ಪರಿಶೀಲನಾ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments