ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದು ಸರಿಯಾಗಿದೆ ಎನ್ನುವ ಮೂಲಕ ನನ್ನ ಬೇರೇನು ಕೇಳಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ
ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಮುಖಂಡರೊರ್ವರ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಧ್ವನಿಗೂಡಿಸಿರುವ ಅವರು ರಾಜ್ಯದಲ್ಲಿ ಸಿಎಂ ಬದಲಾವಣೆ ಮುನ್ಸೂಚನೆ ಕೊಟ್ಟಿದ್ದಾರೆ. ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಆದ್ರೆ ಬಿಜೆಪಿ ಹೆಚ್ಚು ಹೋರಾಟ ಮಾಡಿದಂತೆಲ್ಲಾ ಅದು ಕಾಂಗ್ರೆಸ್ಗೆ ಹೆಚ್ಚು ಅನುಕೂಲ ಆದರೆ ಬಿಜೆಪಿ ಅವರು ಅಧಿಕಾರಕ್ಕೆ ಬರೋ ಚಿಂತನೆಯಲ್ಲಿದ್ದಾರೆ ಅದನ್ನು ನಾವು ಸಹಿಸೊಲ್ಲ, ರಾಜ್ಯದಲ್ಲಿ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಹೇಳಿದರು