ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್ ರದ್ದುಗೊಳಿಸಲು ಸೂಚಿಸಲಾಗಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಸೆಪ್ಟೆಂಬರ್ ೧೮ರಂದು ನೀಡಿದ್ದ ದೂರಿನ ಅನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು.
ನವೆಂಬರ್ 28ರಂದು ಪ್ರಕರಣಕ್ಕೆ ಸಂಬಂಧಿಸಿ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ವಿದೇಶಕ್ಕೆ ಹೋದಾಗ ರಾಹುಲ್ ಗಾಂಧಿ ನೀಡಿದ ಕೆಲವು ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಿದ್ದೇನೆ ಎಂದು ಶಾಸಕ ಯತ್ನಳ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇದೇ ವೇಳೆ ವಕ್ಫ್ ಭೂ ವಿವಾದದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಜನರನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.