ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ತಿಂಗಳಷ್ಟೇ 97ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಲ್ಕೆ ಅಡ್ವಾಣಿ ಕಳೆದ ಕೆಲವು ತಿಂಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಇದೀಗ ನಾಲ್ಕನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಜುಲೈನಿಂದ ಅಪೋಲೋ ಮತ್ತು ಏಮ್ಸ್ ಆಸ್ಪತ್ರೆಗೆ ದಾಖಲಾಗುತ್ತಿರುವ ಅಡ್ವಾಣಿ ಸೂಕ್ತ ಚಿಕಿತ್ಸೆ ನಂತರ ಚೇತರಿಸಿಕೊಂಡು ಬಿಡುಗಡೆ ಆಗಿದ್ದಾರೆ. ಈ ಬಾರಿಯೂ ಅವರ ಆರೋಗ್ಯ ಸ್ಥಿರವಾಗಿದ್ದು ಚಿಂತೆಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


