ಬಿಗ್ ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್ ಗೆ ಸೋಡಿಯಂ ಸ್ಫೋಟ ಪ್ರಕರಣದಲ್ಲಿ ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜೆಎಂಎಫ್ ಸಿ ನ್ಯಾಯಾಲಯ ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ನಡೆಸಿದ ಪ್ರಕರಣದಲ್ಲಿ ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಯೂಟ್ಯೂಬ್ ಚಾನೆಲ್ ನಲ್ಲಿ ಪೋಸ್ಟ್ ಮಾಡಲು ಶೈಕ್ಷಣಿಕ ಮಾಹಿತಿಗಾಗಿ ಸೋಡಿಯಂ ಸ್ಫೋಟ ನಡೆಸಿದ ವೀಡಿಯೋ ಪೋಸ್ಟ್ ಮಾಡಿದ್ದರು.
ರಾಜ್ಯದಲ್ಲಿ ಸೋಡಿಯಂ ಸ್ಫೋಟ ತರಬೇತಿ ನಿಷೇಧವಾಗಿದೆ. ನಿಷೇಧ ಉಲ್ಲಂಘಿಸಿ ಸ್ಫೋಟ ನಡೆಸಿದ್ದಕ್ಕೆ ಪ್ರಕರಣ ದಾಖಲಿಸಿಕೊಂಡ ಮಧುಗಿರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದ್ದ ನ್ಯಾಯಾಲಯ ಇದೀಗ 10 ದಿನಗಳ ನ್ಯಾಯಾಂಗ ಬಂಧನ ನೀಡಿದ್ದು, ಡ್ರೋಣ್ ಪ್ರತಾಪ್ ಮಧುಗಿರಿ ಸಬ್ ಜೈಲಿನಲ್ಲಿ ಕಳೆಯಬೇಕಾಗಿದೆ.