ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಆಡ್ವಾಣಿ ಅವರನ್ನು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಜ್ಞರ ತಂಡ ಆಡ್ವಾಣಿ ಅವರ ಮೇಲೆ ನಿಗಾ ವಹಿಸುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿವೆ ಎಂದು ಆಸ್ಪತ್ರೆ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಡ್ವಾಣಿ ಅವರನ್ನು ನರರೋಗ ತಜ್ಞರು ಚಿಕಿತ್ಸೆ ನೀಡುತ್ತಿದ್ದು, ಆಡ್ವಾಣಿಗೆ ಏನು ಸಮಸ್ಯೆ ಆಗಿದೆ. ಯಾವ ಚಿಕಿತ್ಸೆ ನಡೆಯುತ್ತಿದೆ ಎಂಬ ವಿಷಯವನ್ನು ವೈದ್ಯರು ಬಿಟ್ಟುಕೊಟ್ಟಿಲ್ಲ.