Home ದೇಶ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದ ಟಿಬಿ ಜಯಚಂದ್ರ!

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದ ಟಿಬಿ ಜಯಚಂದ್ರ!

ಬೆಳಗಾವಿ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ. ಜಯಚಂದ್ರ ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

by Editor
0 comments
tb jayachandra

ಬೆಳಗಾವಿ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟಿಬಿ ಜಯಚಂದ್ರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸದನದ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಉತ್ತಮ ಸಂಸದೀಯ ಪಟುವಾಗಿ ಚರ್ಚೆಯ ಗುಣಮಟ್ಟ ಹೆಚ್ಚಿಸಲು ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

7ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪನಾಯಕರಾಗಿ, ಕೃಷಿ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳು, ಪಶುಸಂಗೋಪನೆ, ಮುಜರಾಯಿ ಹಾಗೂ ಸಣ್ಣ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಅವರದ್ದಾಗಿದೆ. ಅಲ್ಲದೆ, ಈ ಮುನ್ನ ಕೂಡ ಅವರು ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿದ್ದರು.

banner

ಕೃಷಿ ಹಾಗೂ ನೀರಾವರಿ ಯೋಜನೆಗಳನ್ನು ರೂಪಿಸುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾ ಬಂದಿರುವ ಇವರು, ಈ ಸಂಬಂಧ ವಿದೇಶಗಳಿಗೂ ಭೇಟಿ ನೀಡಿ ಆಳವಾದ ಅಧ್ಯಯನ ನಡೆಸಿದ್ದಾರೆ. ತುಮಕೂರು ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅವಿರತವಾಗಿ ಶ್ರಮಿಸಿ ಗಮನಸೆಳೆದಿದ್ದಾರೆ.

ಜಯಚಂದ್ರ ಅವರಿಗೆ ಈ ಪ್ರಶಸ್ತಿ ಸಂದಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು ಪಕ್ಷಭೇದವಿಲ್ಲದೆ ಅವರನ್ನು ಅಭಿನಂದಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸ್ಪಿನ್ ದಂತಕತೆ ಆರ್.ಅಶ್ವಿನ್ ನಿವೃತ್ತಿ ಘೋಷಣೆ! ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ ಲಾಭಾಂಶ 108 ಕೋಟಿ ರೂ. ಸರ್ಕಾರಕ್ಕೆ ಹಸ್ತಾಂತರ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದ ಟಿಬಿ ಜಯಚಂದ್ರ! ಒಂದು ದೇಶ, ಒಂದು ಚುನಾವಣೆ: 31 ಸದಸ್ಯರ ಸಂಸದೀಯ ಸಮಿತಿಗೆ 90 ದಿನದ ಗಡುವು! ಐಸಿಯುನಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿಗೆ ಚಿಕಿತ್ಸೆ! ಜಾತಿ ಮೀಸಲಾತಿ ತೆಗೆದು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಜಯೇಂದ್ರ, ನಿರ್ಮಲಾ ಸೀತಾರಾಮ್ ಗೆ ಬಿಗ್ ರಿಲೀಫ್: ಚುನವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ ಹೈಕೋರ್ಟ್ ರದ್ದು ಬೆಂಗಳೂರಿಗೆ ಫುಡ್ ಪ್ಯಾಕೆಟಲ್ಲಿ ಬರುತ್ತೆ ಡ್ರಗ್ಸ್: ಅಂಗಡಿಯಲ್ಲಿ 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ! ಕಬ್ಬು ಕಟಾವು ಕಾರ್ಮಿಕರಿಗೂ ಕಾರ್ಡ್ ವಿತರಣೆಗೆ ಚಿಂತನೆ: ಸಚಿವ ಸಂತೋಷ್ ಲಾಡ್ ರಾಹುಲ್, ಜಡೇಜಾ ಅರ್ಧಶತಕ: ಕೂದಲೆಳೆ ಅಂತರದಲ್ಲಿ ಫಾಲೋಆನ್ ತಪ್ಪಿಸಿಕೊಂಡ ಭಾರತ