ಸಾಲ ತೀರಿಸದೇ ದೇಶ ತೊರೆದಿರುವ ವಿಜಯ್ ಮಲ್ಯ ಹಾಗೂ ನೀರವ್ ಮೋದಿ ಮುಂತಾದವರಿಂದ ಜಾರಿ ನಿರ್ದೇಶನಾಲಯ 22,280 ಕೋಟಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಗಳಿಗೆ ೫ನೇ ಹಂತದ ಅನುದಾನ ಬಿಡುಗಡೆ ಕುರಿತು ರಾಜ್ಯಸಭೆಯಲ್ಲಿ ಬುಧವಾರ ನಡೆದ ಚರ್ಚೆಯ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬ್ಯಾಂಕ್ ಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡವರ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಮೂಲಕ ನಷ್ಟವನ್ನು ಭರ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಮೂಲದ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಸೇರಿದ 14,131.6 ಕೋಟಿ ರೂ. ಆಸ್ತಿ ಜಫ್ತಿ ಮಾಡಿಕೊಂಡು ಬ್ಯಾಂಕ್ ಗಳಿಗೆ ಆಗಿರುವ ಸಾಲವನ್ನು ಭರ್ತಿ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಗುಜರಾತ್ ವಜ್ರದ ವ್ಯಾಪಾರಿ ನೀರವ್ ಮೋದಿಯ 1052.58 ಕೋಟಿ ರೂ., ಮೆಹುಲ್ ಚೊಕ್ಸಿಗೆ ಸೇರಿದ 2565.90 ಕೋಟಿ ರೂ. ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ ಎಂದು ನಿರ್ಮಲಾ ಸೀತರಾಮನ್ ಹೇಳಿದರು.