Home ರಾಜಕೀಯ ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ಅಮಿತ್ ಶಾ ಹೇಳಿಕೆಗೆ ಖಂಡನೆ!

ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ಅಮಿತ್ ಶಾ ಹೇಳಿಕೆಗೆ ಖಂಡನೆ!

ಕಾಂಗ್ರೆಸ್ ಪ್ರತಿಯೊಬ್ಬ ಸದಸ್ಯರೂ ಅಂಬೇಡ್ಕರ್ ಭಾವಚಿತ್ರವನ್ನು ತಮ್ಮ ಆಸನದಲ್ಲಿ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕೆಲವರು ಬಾವಿಗಿಳಿದು ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

by Editor
0 comments
ambedkar photo in belagavi seesion

ಬೆಳಗಾವಿ ಸುವರ್ಣಸೌಧ:  ‘ಧಿಕ್ಕಾರ ಧಿಕ್ಕಾರ, ಕೇಂದ್ರ ಬಿಜೆಪಿ ಸರಕಾರಕ್ಕೆ ಧಿಕ್ಕಾರ’ ಎಂದು ಕಾಂಗ್ರೆಸ್ ಸದಸ್ಯರು ಏಕಾಏಕಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ನಡೆಯಿತು.

ಲೋಕಸಭೆಯಲ್ಲಿ ಬುಧವಾರ ಅಮಿತ್ ಶಾ, ಅಂಬೇಡ್ಕರ್ ಹೆಸರು ಬಳಸುವುದು ಫ್ಯಾಶನ್ ಆಗಿದೆ ಎಂದು ನೀಡಿದ ಹೇಳಿಕೆಯಿಂದ ರಾಜ್ಯದ ವಿವಿಧೆಡೆ ಪ್ರತಿಭಟನೆ ಆರಂಭಗೊಂಡಿದ್ದು, ವಿಧಾನಸಭೆಯಲ್ಲೂ ಕಾಂಗ್ರೆಸ್ ಶಾಸಕರು ಸದನದಲ್ಲೇ ಧಿಕ್ಕಾರ ಕೂಗಿದರು. ಮಾತ್ರವಲ್ಲ,ಒಂದಿಬ್ಬರು ಆಕ್ರೋಶ ವ್ಯಕ್ತಪಡಿಸುವ ಧಾವಂತದಲ್ಲಿ ಸದನದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿದರು. ಅಮಿತ್ ಶಾ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಅಮಿತ್ ಶಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿತು. ಗಂಭೀರ ವಿಷಯ ಕುರಿತು ಚರ್ಚೆ ನಡೆಯುವ ವೇಳೆ ಕಾಂಗ್ರೆಸ್ ಶಾಸಕರು ಬಾವಿಗಿಳಿದು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ದಿಢೀರ್ ಪ್ರತಿಭಟನೆ ನಡೆಸಿ ಅಚ್ಚರಿ ಮೂಡಿಸಿದರು.

ಕಾಂಗ್ರೆಸ್ ಪ್ರತಿಯೊಬ್ಬ ಸದಸ್ಯರೂ ಅಂಬೇಡ್ಕರ್ ಭಾವಚಿತ್ರವನ್ನು ತಮ್ಮ ಆಸನದಲ್ಲಿ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕೆಲವರು ಬಾವಿಗಿಳಿದು ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

banner

ಕಾಂಗ್ರೆಸ್ ಪ್ರತಿಭಟನೆಯ ಸುಳಿವನ್ನೂ ಅರಿಯದ ಬಿಜೆಪಿ ಶಾಸಕರು ಬಾಣಂತಿಯರ ಸಾವಿನ ವಿಷಯ ಕುರಿತು ಗಂಭೀರ ಚರ್ಚೆ ನಡೆಸುವ ವೇಳೆ ದಿಢೀರನೇ ನಡೆದ ಈ ಪ್ರತಿಭಟನೆಯಿಂದ ಅವಕ್ಕಾದರು. ಸಭಾಧ್ಯಕ್ಷ ಯು.ಟಿ.ಖಾದರ್ ಸಹ ಯಾವ ಸೂಚನೆ ನೀಡದೇ ಆಸನದಿಂದ ಕೆಳಗಿಳಿದು ಹೊರನಡೆದರು.

ಕಾಂಗ್ರೆಸ್ ಸದಸ್ಯರ ಪ್ರತಿರೋಧ ಹೆಚ್ಚುತ್ತಿದ್ದಂತೆ ಒಬ್ಬೊಬ್ಬರಾಗೇ ಕಾಲು ಕಿತ್ತ ಬಿಜೆಪಿ ಸದಸ್ಯರು, ನಾವು ಸಹ ಅಂಬೇಢ್ಕರ್ ಅಭಿಮಾನಿಗಳೇ. ಅವರ ಹೆಸರಿನಲ್ಲಿ ಕಲಾಪವನ್ನು ಹತ್ತಿಕ್ಕುವ ಕಾರ್ಯ ಕಾಂಗ್ರೆಸ್ ಶಾಸಕರಿಂದ  ನಡೆಯುತ್ತಿದೆ ಎಂದು ದೂರಿ, ಹೊರನಡೆದರು.

ಬೈಂದೂರಿನ ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳಿ ಅವರೊಬ್ಬರೇ ಏಕಾಂಗಿಯಾಗಿ ಅಂಬೇಡ್ಕರ್ ಭಾವಚಿತ್ರ ಹಿಡಿದು, ಅಂಬೇಡ್ಕರ್ ಪರ ಘೋಷಣೆ ಕೂಗಿ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿರೋಧ ಒಡ್ಡಿದರು. ಏಕಾಂಗಿಯಾಗಿಯೇ ಕಾಂಗ್ರೆಸ್ ಶಾಸಕರ ವಿರುದ್ಧ ಕೆಲ ಕಾಲ ಆಕ್ರೋಶ ವ್ಯಕ್ತಪಡಿಸಿ, ನಂತರ ಅವರು ಕೂಡ ಸದನದಿಂದ ಹೊರನಡೆದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸಿಟಿ ರವಿ ವಿರುದ್ಧ ಸಭಾಪತಿ, ಪೊಲೀಸರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು: 30 ಬೆಂಬಲಿಗರು ಪೊಲೀಸ್ ವಶಕ್ಕೆ ಹೆಸರು ತಪ್ಪಾಗಿದೆ ಅಂತ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಸ್ತಾಪ ತಿರಸ್ಕಾರ! ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಪಾಕಿಸ್ತಾನಿಯರು, 159 ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ: ಗೃಹ ಸಚಿವ ಜಿ. ಪರಮೇಶ್... ಕಾಂಗ್ರೆಸ್ಸಿಗರಿಗೆ ಡಾ.ಅಂಬೇಡ್ಕರರ ಫೋಟೊ ಹಿಡಿಯುವ ಯೋಗ್ಯತೆಯೂ ಇಲ್ಲ: ಆರ್.ಅಶೋಕ್ ಟೀಕೆ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ ಸಂಸತ್ ಬಳಿ ಹೈಡ್ರಾಮಾ: ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಗಾಯ: ಸ್ಪೀಕರ್ ಗೆ ದೂರು ಸಂಸತ್ ಬಳಿ ಕಾಂಗ್ರೆಸ್-ಬಿಜೆಪಿ ಜಟಾಪಟಿಯಲ್ಲಿ ಬಿಜೆಪಿ ಸಂಸದನಿಗೆ ಗಾಯ: ರಾಹುಲ್ ವಿರುದ್ಧ ದೂರು! ಲೋಕಸಭೆಯಲ್ಲಿ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕಾಂಗ್ರೆಸ್ ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ಅಮಿತ್ ಶಾ ಹೇಳಿಕೆಗೆ ಖಂಡನೆ! ಅಪ್‍ಗ್ರೇಡ್ ಆದಾಯ ಪ್ರಗತಿ ಶೇ 30 ಹೆಚ್ಚಳ; ಇಬಿಐಟಿಡಿ & ಪಿಎಟಿ ನಷ್ಟ ಶೇ. 50 ಕುಸಿತ