ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಸದನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಮಂಡಿಸಲಿದೆ.
ಲೋಸಕಭೆಯಲ್ಲಿ ಸಂವಿಧಾನ ಜಾರಿಯಾಗಿ 75ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾಷಣ ಮಾಡುವಾಗ ಅಮಿತ್ ಶಾ ಅಂಬೇಡ್ಕರ್ ಹೆಸರು ಬಳಕೆ ಈಗ ಫ್ಯಾಷನ್ ಆಗಿ ಬಿಟ್ಟಿದೆ. ಅಂಬೇಡ್ಕರ್ ಹೆಸರು ಜಪ ಮಾಡುವ ಬದಲು ದೇವರನ್ನು ಜಪ ಮಾಡಿದ್ದರೆ ೭ ಜನ್ಮಗಳ ವರೆಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಅಮಿತ್ ಶಾ ಹೇಳಿಕೆ ಖಂಡಿಸಿ ತೃಣಮೂಲ ಕಾಂಗ್ರೆಸ್ ಪಕ್ಷ ಬುಧವಾರ ಹಕ್ಕುಚ್ಯುತಿ ಮಂಡಿಸಿತ್ತು. ಇದೀಗ ಕಾಂಗ್ರೆಸ್ ಕೂಡ ಹಕ್ಕುಚ್ಯುತಿ ಮಂಡಿಸಿದೆ.
ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಬುಧವಾರ ಪ್ರತಿಭಟನೆ ನಡೆಸಿದ್ದು, ಸಾಂವಿಧಾನಿಕ ಸ್ಥಾನ ಪಡೆದಿರುವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿತ್ತು.
ಪ್ರಧಾನಿ ಮೋದಿ, ಕೆಲವೇ ನಿಮಿಷಗಳಲ್ಲಿ ೬ ಬಾರಿ ಟ್ವಿಟ್ ಮಾಡಿ ಅಮಿತ್ ಶಾ ಬೆಂಬಲಕ್ಕೆ ನಿಂತಿದ್ದರು. ಅಲ್ಲದೇ ಕಾಂಗ್ರೆಸ್ ಅಮಿತ್ ಶಾ ಹೇಳಿಕೆಯನ್ನು ತಪ್ಪಾಗಿ ಗ್ರಹಿಸುವ ಮೂಲಕ ಕೊಳಕು ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು.