ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿದೆ.ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿದೆ.
ನ್ಯಾಯಮೂರ್ತಿ ಎಂ.ಜಿ.ಉಮಾ ನೇತೃತ್ವದ ಪೀಠ, ಜನಪ್ರತಿನಿಧಿಗಳ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಬಂಧನ ಅಕ್ರಮವಾಗಿದ್ದರೆ ಬಿಡುಗಡೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ.
ವಿಧಾನಪರಿಷತ್ ಕಲಾಪದಲ್ಲಿ ತಮ್ಮನ್ನು ಅವಾಚ್ಯ ಶಬ್ದಗಳಿಂದ ಸಿಟಿ ರವಿ ನಿಂದಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಹೀರೇಬಾಗೇನವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದಕ್ಕೂ ಮುನ್ನ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ಸಲ್ಲಿಸಿದ್ದರು.