ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದು ಕಾರಿನ ಮೇಲೆ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯದಲ್ಲಿ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ತಾಳೇಕೆರೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಒಂದು ಲಾರಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ಕಾರಿನ ಲಾರಿಯ ಕಂಟೇನರ್ ಮೇಲೆ ಬಿದ್ದಿದೆ. ಇದರಿಂದ ಕಾರಿನಲ್ಲಿದ್ದ ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭೀಕರ ದುರಂತದಿಂದ ಸುಮಾರು 3 ಕಿ.ಮೀ. ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪರಿಹಾರ ಕಾರ್ಯಾಚರಣೆಗೂ ಅಡ್ಡಿಯಾಗಿದೆ.
ಲಾರಿ ಮುಂದೆ ಎರಡು ಕಾರುಗಳು ಮುಂದೆ ಬಂದಿದ್ದರಿಂದ ಅಪಘಾತ ತಪ್ಪಿಸಲು ಹೋದಾದ ಈ ದುರ್ಘಟನೆ ಸಂಭವಿಸಿದೆ. ವಿಜಯಪುರ ಮೂಲದ ಇಂಜಿನಿಯರ್ ಕುಟುಂಬ ಮೃತಪಟ್ಟ ದುರರ್ದೈವಿಗಳು ಎಂದು ಪ್ರಾಥಮಿಕ ಮಾಹಿತಿ ಗಳಿಂದ ತಿಳಿದು ಬಂದಿದೆ.
ಲಾರಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದರೆ, ಬೆಂಗಳೂರಿನಿಂದ ಕಾರು ತುಮಕೂರು ಕಡೆ ಹೋಗುತ್ತಿತ್ತು. ಕಂಟೇನರ್ ಬಿದ್ದಿದ್ದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.