ಇಂದಿನಿಂದ ಮೋದಿ 2 ದಿನ ಕುವೈತ್ ಪ್ರವಾಸ; 43 ವರ್ಷ ನಂತರ ಭೇಟಿ ನೀಡಿದ ಮೊದಲ ಪ್ರಧಾನಿ!ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 2 ದಿನಗಳ ಕಾಲ ಅರಬ್ಬರ ನಾಡಾದ ಕುವೈತ್ ಪ್ರವಾಸ ಕೈಗೊಂಡಿದ್ದಾರೆ.
ದ್ವಿಪಕ್ಷೀಯ ಸಂಬಂಧ ಮತ್ತು ಇಂಧನ ಸಹಕಾರ ವೃದ್ಧಿಗಾಗಿ ಮೋದಿ ಕುವೈತ್ಗೆ ಭೇಟಿ ನೀಡುತ್ತಿದ್ದು, 43 ವರ್ಷಗಳ ನಂತರ ಕುವೈತ್ ಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಆಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಕುವೈತ್ನಲ್ಲಿ ಶನಿವಾರ ನಡೆಯುವ ʻಹಾಲಾ ಮೋದಿ ಮೆಗಾ ಡಯಾಸ್ಪೊರಾʼಕಾರ್ಯಕ್ರಮಕ್ಕೆ ಈಗಾಗಲೇ ವೇದಿಕೆ ಸಿದ್ಧಪಡಿಸಲಾಗಿದೆ. ಸುಮಾರು 5,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.