Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಜಿಲ್ಲಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
soldier
soldier

ಉಡುಪಿ (ಕುಂದಾಪುರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಯೋಧರು ಪ್ರಯಾಣ ಮಾಡುತ್ತಿದ್ದ ವಾಹನವೊಂದು ರಸ್ತೆಯಿಂದ ಕಣಿವೆಗೆ ಉರುಳಿ ಬಿದ್ದು ಮೃತಪಟ್ಟ, ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಬೀಜಾಡಿಯ ಯೋಧ ಅನೂಪ್ ಪೂಜಾರಿ (33) ಅವರ ಪಾರ್ಥಿವ ಶರೀರ ಗುರುವಾರ ಹುಟ್ಟೂರು ಬೀಜಾಡಿ ಬಂದಿದೆ.  ಸಾವಿರಾರೂ ಸಂಖ್ಯೆ ಜನರು ಅಂತಿಮ ದರ್ಶನ ಪಡೆದುಕೊಂಡರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಗುರುವಾರ ರಾತ್ರಿ ಬಂದ ಪಾರ್ಥಿವ ಶರೀರವನ್ನು ಅಧಿಕಾರಿಗಳು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದರು. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ ಸೇರಿದಂತೆ ಹಲವರು ಪಾರ್ಥಿವ ಶರೀರ ಹಸ್ತಾಂತರ ಮಾಡುವಾಗ ಹಾಜರಿದ್ದರು. ಬಳಿಕ ಮೃತದೇಹವನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ತರಲಾಯಿತು. ಬೆಳಿಗ್ಗೆ ಗಾಜಿನ ಕಿಟಕಿ ಇರುವ ಅಂಬುಲೆನ್ಸ್ ವಾಹನಕ್ಕೆ ಪುಷ್ಪಾಲಂಕಾರ ಮಾಡಿ ಉಡುಪಿಯಿಂದ ಮೆರವಣಿಗೆ ಹೊರಟಿತು.

ಪಾರ್ಥಿವ ಶರೀರ ಸಾಗಿ ಬರುವ ಮಾರ್ಗದ ನಡುವೆ ಬ್ರಹ್ಮಾವರ, ಸಾಸ್ತಾನ ಟೋಲ್ ಗೇಟ್, ಅನೂಪ್ ಕಲಿತ ಕೋಟ ವಿವೇಕ ಶಾಲೆ ಎದುರು, ಕೋಟ ಅಮೃತೇಶ್ವರಿ ದೇವಸ್ಥಾನದ ಎದುರು ಜಮಾಯಿಸಿದ್ದ ಜನರು ‘ಅನೂಪ್ ಅಮರ್ ರಹೇ’, ಭಾರತ ಮಾತಾಕಿ ಜೈಕಾರ ಕೂಗುತ್ತಾ ಪುಷ್ಪಾರ್ಚನೆ ಮಾಡಿ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನೆರದಿದ್ದ ಜನರು ಪಾರ್ಥಿವ ಶರೀರವನ್ನು ಬರಮಾಡಿಕೊಂಡರು. ತೆಕ್ಕಟ್ಟೆಯಿಂದ ಕೋಟೇಶ್ವರ ಮಾರ್ಗವಾಗಿ ವಾಹನ ಜಾಥಾ ಮೂಲಕವಾಗಿ ಸಾಗಿ ಬೀಜಾಡಿ‌ ನಿವಾಸಕ್ಕೆ ಬಂದು ತಲುಪಿತು.

ಮೃತದೇಹ ಮನೆಗೆ ಬರುತ್ತಿದ್ದಂತೆ ಮೃತ ಅನೂಪ್ ಅವರ ತಾಯಿ, ಪತ್ನಿ, ಸಹೋದರಿಯರು ಸೇರಿದಂತೆ ಕುಟುಂಬದ ಸದಸ್ಯರು ಕಣ್ಣೀರು ಹಾಕಿದರು. ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಕೆ.ಟಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು.

ಮೃತ ಅನೂಪ್ ಅವರ ಮನೆಯ ಸಮೀಪದಲ್ಲಿಯೇ ಇರುವ ಶಾಲೆಗೆ ಮೃತದೇಹ ಕೊಂಡೊಯ್ದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. 3 ಗಂಟೆಗೂ ಅಧಿಕ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ನಮನ ಅಂತಿಮ ನಮನ ಸಲ್ಲಿಸಿದರು.

ಮನೆ ಸಮೀಪದ ಸಮುದ್ರ ತೀರದ ಜಾಗದಲ್ಲಿ ಅಂತಿಮ ನಮನ ಸಲ್ಲಿಸಿ ಸೇನೆಯ ಗೌರವವಂದನೆ ನೀಡಿ, ಸೇನೆಯ ಅಧಿಕಾರಿಗಳು ಅನೂಪ್ ಪೂಜಾರಿ ಅವರ ಪತ್ನಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಸಕಲ ವಿಧಿ ವಿಧಾನಗಳು ನಡೆದ ಬಳಿಕ ಅಂತ್ಯಕ್ರಿಯೆ ನಡೆಸಲಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment