Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಅಪರಾಧ

ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
dharwad police
dharwad police

ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಕಳೆದ 6 ತಿಂಗಳ ಹಿಂದೆ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್‌ಡಿಎಂ ಆಸ್ಪತ್ರೆಯ ಹಿಂಭಾಗದ ಅಶೋಕ ಕದಂ ಎಂಬುವರ ಮನೆ ಬಾಗಿಲಿಗೆ ಕಲ್ಲು ಒಗೆದು ಬಾಗಿಲು ಮುರಿದು ರಾತ್ರಿ ಸಮಯದಲ್ಲಿ ಮನೆಯಲ್ಲಿದ್ದ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾಗಿದ್ರು . ಈ ಪ್ರಕರಣವನ್ನು ಬೆನ್ನತ್ತಿದ್ದ ವಿದ್ಯಾಗಿರಿ ಠಾಣೆಯ ಪೊಲೀಸರು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಆರೋಪಿಗಳು ಆಂಧ್ರಪ್ರದೇಶದ ಕರ್ನುಲ್’ನ ನಟೋರಿಯಸ್ ಚಡ್ಡಿ ಗ್ಯಾಂಗ್ ಅನ್ನೋದು ಗೊತ್ತಾಗಿದೆ.

ಪ್ರರಣವನ್ನು ಬೆನ್ನತ್ತಿದ್ದ ವಿದ್ಯಾಗಿರಿ ಠಾಣೆಯ ಪೊಲೀಸರು ಈ ಪ್ರಕರಣ ಮಾಸುವ ಮುನ್ನವೇ ಇದೆ ಗ್ಯಾಂಗ್ ನವಲೂರಿನಲ್ಲಿ ಶುಕ್ರವಾರ ರಾತ್ರಿ ಮನೆಯೊಂದನ್ನು ದರೋಡೆ ಮಾಡಲು ಯೋಜನೆ ಮಾಡಿದ್ದ , ವೇಳೆ ವಿದ್ಯಾಗಿರಿ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು.

ಆತ್ಮರಕ್ಷಣೆಗಾಗಿ ಪಿಎಸ್ ಐ ಪ್ರಮೋದ ದರೊಡೆಕೋರ ಪಾಲಾ ವೆಂಕಟೇಶ್ವರ ರಾವ್ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಘಟನೆಯಲ್ಲಿ ಪಿ.ಎಸ್.ಐ  ಪ್ರಮೋದ ಸೇರಿದಂತೆ ಓರ್ವ ಪೊಲೀಸ್ ಕಾನ್ಸ್ ಟೇಬಲ್‌ಗೆ ಗಾಯವಾಗಿದೆ. ಕಮಿಷನರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ .

ಪೊಲೀಸರು ಫೈರಿಂಗ್ ಮಾಡಿದ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ನೇತೃತ್ವದಲ್ಲಿ ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ನಟೋರಿಯಸ್ ದರೋಡೆ ಮಾಡುವ ಚಡ್ಡಿ ಗ್ಯಾಂಗ್ ಕರ್ನಾಟಕದ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದರೋಡೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಪೊಲೀಸರು ಇನ್ನೂ ಹೆಚ್ಚಿನ ತನಿಖೆ ನಡೆಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment