Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

2024ರ ಲೋಕಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡ 7190 ಅಭ್ಯರ್ಥಿಗಳು: ಚುನಾವಣಾ ಆಯೋಗ ವರದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
vote
vote

2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶೇ.86ರಷ್ಟು ಅಂದರೆ ಸುಮಾರು 7190 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗದ ವರದಿ ತಿಳಿಸಿದೆ.

ಕೇಂದ್ರ ಚುನಾವಣಾ ಆಯೋಗ ಗುರುವಾರ ಲೋಕಸಭಾ ಚುನಾವಣೆ ಕುರಿತು ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕರ 2024ರ ಲೋಕಸಭಾ ಚುನಾವಣೆಯಲ್ಲಿ 12,459 ಮಂದಿ ನಾಮಪತ್ರ ಸಲ್ಲಿಸಿದ್ದರು. 2019ರಲ್ಲಿ 11,692 ಅಭ್ಯರ್ಥಿಗಳು ಕಣದಲ್ಲಿದ್ದರು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಅತೀ ಹೆಚ್ಚು ಅಭ್ಯರ್ಥಿಗಳು ಅಖಾಡಕ್ಕೆ ಇಳಿದಿದ್ದರು.

ನಾಮಪತ್ರ ಸಲ್ಲಿಸಿದ್ದ 12,000 ಅಭ್ಯರ್ಥಿಗಳ ಪೈಕಿ ನಾಮಪತ್ರ ತಿರಸ್ಕೃತ, ವಾಪಸ್ ಪಡೆಯುವುದು ಸೇರಿದಂತೆ ಎಲ್ಲಾ ಪ್ರಕ್ರಿಯೆ ಮುಗಿದ ನಂತರ 8360 ಅಭ್ಯರ್ಥಿಗಳು ಕಣದಲ್ಲಿದ್ದರು. 2019ರಲ್ಲಿ ೮೦೫೪ ಮಂದಿ ಸ್ಪರ್ಧೆಲ್ಲಿದ್ದರು.

ಚುನಾವಣೆ ಫಲಿತಾಂಶದ ನಂತರ 7190 ಮಂದಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಅಂದರೆ ಶೇ.86ರಷ್ಟು ಮಂದಿ ಸ್ಪರ್ಧಿಸಲು ಸಲ್ಲಿಸಿದ್ದ ಶುಲ್ಕವನ್ನು ಕೂಡ ವಾಪಸ್ ಪಡೆಯಲು ವಿಫಲರಾಗಿದ್ದಾರೆ.

ಠೇವಣಿ ಕಳೆದುಕೊಂಡ 2190 ಅಭ್ಯರ್ಥಿಗಳಲ್ಲಿ 584 ಮಂದಿ ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಸೇರಿದ್ದಾರೆ. 86 ಅಭ್ಯರ್ಥಿಗಳು ಪ್ರಾದೇಶಿಕ ಪಕ್ಷಗಳ ಸದಸ್ಯರಾಗಿದ್ದಾರೆ. 2633 ಮಂದಿ ನೋಂದಾಯಿತ ಮತ್ತು ನೋಂದಾವಣೆ ಮಾಡಿಕೊಳ್ಳದ ಪಕ್ಷಗಳಿಗೆ ಸೇರಿದವರಾಗಿದ್ದಾರೆ. 3905  ಮಂದಿ ಸ್ವತಂತ್ರ ಅಭ್ಯರ್ಥಿಗಳಾಗಿದ್ದಾರೆ. 2019ರಲ್ಲಿ 6923 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು.

3921 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದು, ಕೇವಲ 7 ಮಂದಿ ಗೆಲುವು ಸಾಧಿಸಿದ್ದಾರೆ. ಅಂದರೆ ಪಕ್ಷೇತರ ಅಭ್ಯರ್ಥಿಗಳು ಪಡೆದ ಮತಗಳ ಪ್ರಮಾಣ ಶೇ.2.79 ಆಗಿದೆ.

ಚುನಾವಣಾ ನಿಯಮದ ಪ್ರಕಾರ ಲೊಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ಅಭ್ಯರ್ಥಿಗಳು 25 ಸಾವಿರ ರೂ. ಠೇವಣಿ ಇಡಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿ ಇರುತ್ತದೆ. ಅನಾವಶ್ಯಕವಾಗಿ ಸ್ಪರ್ಧಿಸಿ ಚುನಾವಣಾ ವೆಚ್ಚಕ್ಕೆ ಕಾರಣ ಆಗಬಾರದು ಎಂಬ ಕಾರಣಕ್ಕೆ ಠೇವಣಿ ಇರಿಸಿಕೊಳ್ಳಲಾಗುತ್ತದೆ. ಗೆಲುವಿನ ಅಭ್ಯರ್ಥಿಗಿಂತ 6ನೇ ಒಂದು ಭಾಗದಷ್ಟು ಮತ ಪಡೆಯಲು ವಿಫಲವಾದರೆ ಠೇವಣಿ ಹಣ ಹಿಂತಿರುಗಿಸಲಾಗುವುದಿಲ್ಲ. ಇದರರ್ಥ ಅಭ್ಯರ್ಥಿ ಠೇವಣಿ ಕಳೆದುಕೊಂಡ ಎಂಬುದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment