Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ನಟ ದರ್ಶನ್ ಗೆ ಸಂಕಷ್ಟ: ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೇಲ್ಮನವಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
darshan
darshan

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಬೆನ್ನು ನೋವಿನ ಕಾರಣ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್ ನಂತರ ಮಾಮೂಲು ಜಾಮೀನು ನೀಡಿ ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದ್ದ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಮನೆಗೆ ಮರಿದ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿದ್ದವು.

ದರ್ಶನ್ ಪ್ರಕರಣದಲ್ಲಿ ಪೊಲೀಸ್ ಇಲಾಖೆ ತನಿಖೆ ಬಗ್ಗೆ ಲೋಪಗಳು ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ಹಿನ್ನಡೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಹಾಗೂ ಸಹಚರರಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿತ್ತು.

ಪೊಲೀಸ್ ಇಲಾಖೆಯ ಮನವಿಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇನ್ನೆರಡು ದಿನದಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ಮಾಡಲು ಚಾರ್ಜ್ ಶೀಟ್, ಕಡತ, ಸಾಕ್ಷ್ಯಗಳ ಹೇಳಿಕೆಗಳನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಲಾಗುತ್ತಿದ್ದು, ನಾಳೆ ಅಥವಾ ನಾಡಿದ್ದು ಮೇಲ್ಮನವಿ ಜೊತೆ ದಾಖಲೆಗಳನ್ನು ಸಲ್ಲಿಸುವ ಸಾಧ್ಯತೆ ಇದೆ.

ಸುಪ್ರೀಂಕೋರ್ಟ್ ನಲ್ಲಿ ಸರ್ಕಾರದ ಪರ ವಾದ ಮಂಡಿಸಲು ಅನಿಲ್ ಸಿ. ನಿಶಾನಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು, ಸೀನಿಯರ್ ಲಾಯರ್ ಸಿದ್ಧಾರ್ಥ ಲೂತ್ರ ಅವರನ್ನು ಮಾರ್ಗದರ್ಶಕರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment