Sunday, December 7, 2025
Google search engine
Homeಜಿಲ್ಲಾ ಸುದ್ದಿಶರಾವತಿ ಸೇತುವೆ ಮೇಲೆ ಕೆಸ್ಸಾರ್ಟಿಸಿ ಬಸ್ ಡಿಕ್ಕಿ: ಬೈಕ್ ಮೇಲಿದ್ದ ಮೂವರು ದುರ್ಮರಣ

ಶರಾವತಿ ಸೇತುವೆ ಮೇಲೆ ಕೆಸ್ಸಾರ್ಟಿಸಿ ಬಸ್ ಡಿಕ್ಕಿ: ಬೈಕ್ ಮೇಲಿದ್ದ ಮೂವರು ದುರ್ಮರಣ

ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾವರದ ಶರಾವತಿ ಸೇತುವೆ ಮೇಲೆ ಸಂಭವಿಸಿದೆ.

ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ವಿಜಾಪುರದಿಂದ ಮಂಗಳೂರು ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಂಕಿ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ್ ನಾಯ್ಕ ( 25), ಖರ್ವಾದ ರಮೇಶ್ ನಾಯ್ಕ (22) ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ.

ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments