19
ಸೇನಾ ವಾಹನ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಯೋಧರು ಮೃತಪಟ್ಟು, ಇಬ್ಬರಿಗೆ ಗಾಯವಾದ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ.
ಬಂಡೀಪೊರ ಜಿಲ್ಲೆಯ ಎಸ್ ಕೆ ಪಯಾನೆ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಕಡಿದಾದ ರಸ್ತೆಯಲ್ಲಿ ಟ್ರಕ್ ಸ್ಕಿಡ್ ಆಗಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದು, ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಪಾತಕ್ಕೆ ಟ್ರಕ್ ಬಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ.