Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ವಿದೇಶ

ಟಿಬೆಟ್ ನಲ್ಲಿ ಪ್ರಬಲ ಭೂಕಂಪನ: ಮೃತರ ಸಂಖ್ಯೆ 53ಕ್ಕೆ ಏರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 41 ವೀಕ್ಷಣೆಗಳು
tibet
tibet

ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 52 ಮಂದಿ ಬಲಿಯಾಗಿದ್ದು, 65ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 53 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.
ಡಿಂಗ್ರಿ ಕೌಂಟಿಯಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದ್ದು, ಟಿಬೆಟ್, ನೇಪಾಳ, ಚೀನಾ ಹಾಗೂ ಭಾರತದ ಉತ್ತರ ರಾಜ್ಯಗಳಲ್ಲಿ ಭೂಕಂಪನ ಸಂಭವಿಸಿದೆ.

ಹಿಮಾಲಯ ಪರ್ವತದ ತಪ್ಪಲಲ್ಲಿ ಪದೇಪದೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಟಿಬೆಟ್ ಹಾಗೂ ನೇಪಾಳದ ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1ರ ತೀವ್ರತೆ ದಾಖಲಾಗಿದೆ. ಅಲ್ಲದೇ ನಂತರವೂ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಬಾರಿ 7.02 ಗಂಟೆಗೆ 4.7ರ ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದರೆ, 7.07 ನಿಮಿಷಕ್ಕೆ 4.9 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಮೊದಲ ಬಾರಿ 10 ಕಿ.ಮೀ. ಆಳದಲ್ಲಿ ಭೂಕಂಪನದ ತೀವ್ರತೆ ಕಂಡು ಬಂದರೆ, ಮೂರನೇ ಬಾರಿ 30 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ.

ಭಾರತದಲ್ಲಿ ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಬಿಹಾರದಲ್ಲಿ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ಯಾವುದೇ ಆಸ್ತಿಪಾಸ್ತಿ, ಪ್ರಾಣಹಾನಿ ಸಂಭವಿಸಿದ ವರದಿಯಾಗಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment