Saturday, May 16, 2026
Google search engine
Homeಮನರಂಜನೆನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಜಯಂತಿ ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು.

ನನ್ನ ಮತ್ತು ಜಯಂತಿ ಅವರ ರಾಜಕೀಯ ಮೌಲ್ಯಗಳು ಒಂದೇ ಆಗಿದ್ದರು. ಸಮಾಜ ಪ್ರೇಮಿ, ಮಾನವೀಯತೆಯ ಪ್ರೇಮಿ ಆಗಿದ್ದರು ಎಂದು ಬಣ್ಣಿಸಿದರು.

ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಹಿಂದೆಲ್ಲಾ ಒಳ್ಳೆ ಗುಣಮಟ್ಟ ಕಾಯ್ದುಕೊಂಡಿವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ ಶೇ. 100ರಷ್ಟು ತೆರಿಗೆ ವಿನಾಯಿತಿ ಘೋಷಿಸಿದ್ದು ನಾನೇ. ಪಿ.ಲಂಕೇಶ್ ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ಸ್ಮರಿಸಿದರು.

ನಟ ರಮೇಶ್ ಅರವಿಂದ್, ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್, ಹಿರಿಯ ಪತ್ರಕರ್ತ ಸಮೀವುಲ್ಲಾ, ಜಯಂತಿ ಪುತ್ರ ಕೃಷ್ಣಕುಮಾರ್ ಮತ್ತು ಕೃತಿಯ ಲೇಖಕ ಸದಾಶಿವ ಶೆಣೈ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments