Home ಮನರಂಜನೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

by Editor
0 comments
actror kishor

ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಶ್ರೀ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ  16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ “ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾಥಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಜ.11ರಿಂದ 3 ದಿನ ಅಯೋಧ್ಯೆ ರಾಮಮಂದಿರ ವಾರ್ಷಿಕೋತ್ಸವ: 100 ಗಣ್ಯರಿಗೆ ಆಹ್ವಾನ ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ದರೆ ಬ್ಯಾಂಕ್ ಗೆ ಬೀಳುತ್ತೆ ದಂಡ! SHOCKING: 69 ಉಗ್ರರಿರುವ ಜೈಲಿನಲ್ಲಿ ಹಾರಾಡಿದ ಡ್ರೋಣ್: 8 ದಿನಗಳ ನಂತರ ಪತ್ತೆ! 2 ಲಕ್ಷ ಬ್ಯಾಂಕ್ ಉದ್ಯೋಗಕ್ಕೆ ಕತ್ತರಿ ಹಾಕಲಿದೆ ಎಐ! ಹಾಡುಹಗಲೇ ಮಚ್ಚಿನಿಂದ ಕೊಚ್ಚಿ ಯುವತಿ ಕೊಲೆಗೈದ ಸಹದ್ಯೋಗಿ: ರಕ್ಷಿಸಲು ಬಾರದ ಜನ! ಮದ್ಯಪ್ರಿಯರಿಗೆ ಬಿಗ್ ಶಾಕ್: ಬಿಯರ್ ಬೆಲೆ ಸದ್ದಿಲ್ಲದೇ ಏರಿಕೆ! 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್ ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚಿಗೆ 5 ಮಂದಿ ಬಲಿ: ಊರು ಬಿಟ್ಟ 1,00,00 ಜನ!