ಶಾಲೆಯಲ್ಲಿ ಪರೀಕ್ಷೆ ತಪ್ಪಿಸಿಕೊಳ್ಳಲು ನಗರದ 23 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ ಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಗರದ ಪ್ರಮುಖ ಶಾಲೆಗಳಿಗೆ ಹುಸಿ ಬಾಂಬ್ ಕರೆ ಬರುತ್ತಿರುವುದರಿಂದ ತಲೆಕೆಡಿಸಿಕೊಂಡಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸಿದ್ದು, ಈತ ಶಾಲೆಯ ಪರೀಕ್ಷೆ ತಪ್ಪಿಸಿಕೊಳ್ಳಲು 12ನೇ ತರಗತಿ ವಿದ್ಯಾರ್ಥಿ ಎಂದು ತಿಳಿದು ಶಾಕ್ ಆಗಿದ್ದಾರೆ.
ಇ-ಮೇಲ್ ಮೂಲಕ 6 ಬಾರಿ ವಿವಿಧ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಈತ, ಅನುಮಾನ ಬರಬಾರದು ಎಂಬ ಕಾರಣಕ್ಕೆ ತನ್ನ ಶಾಲೆಯ ಹೆಸರನ್ನು ಮಾತ್ರ ಸೇರಿಸುತ್ತಿರಲಿಲ್ಲ. ನಗರದ ಬಹುತೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಈ ವಿದ್ಯಾರ್ಥಿ ಕಳೆದ ವಾರ ಒಂದೇ ಬಾರಿ 23 ಶಾಲೆಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ.
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿ ಬಾಂಬ್ ಬೆದರಿಕೆ ಕರೆ ಮಾಡುವ ಯೋಜನೆ ರೂಪಿಸಿದ್ದಾನೆ. ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿ ಗೊಂದಲ ಸೃಷ್ಟಿಸಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳುವುದು ಅವನ ಉದ್ದೇಶವಾಗಿತ್ತು.