Home ತಾಜಾ ಸುದ್ದಿ BBMP ಅತೀ ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡ 830 ವಸತಿಯೇತರ ಕಟ್ಟಡಗಳಿಗೆ ಬೀಗ

BBMP ಅತೀ ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡ 830 ವಸತಿಯೇತರ ಕಟ್ಟಡಗಳಿಗೆ ಬೀಗ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು.

by Editor
0 comments
BBMP

ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು.

ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಕ್ರಮವಹಿಸಲಾಗುತ್ತಿದೆ.

ಎಲ್ಲಾ ಪರಿಷ್ಕರಣೆ ಪ್ರಕರಣಗಳಲ್ಲಿ, ಆಸ್ತಿಗಳಿಗೆ ಬೀಗಮುದ್ರೆ, ಮುಟ್ಟುಗೋಲು ಮತ್ತು ಜಪ್ತಿ ಮಾರಾಟವನ್ನು ಬಳಸಿಕೊಂಡು ವಸೂಲಾತಿ ಮಾಡಬೇಕಿದೆ. ಈ ಸಂಬಂಧ 1ನೇ ಜನವರಿ 2025 ರಿಂದ 9ನೇ ಜನವರಿ 2025 ರವರೆಗೆ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಂತಹ 830 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿದೆ.

banner

ಕಳೆದ 24 ಗಂಟೆಗಳಲ್ಲಿ ಎಲ್ಲಾ 08 ವಲಯಗಳು ಸೇರಿದಂತೆ 182 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಗೌತಮ್ ಜೊತೆ ಬಿಸಿಸಿಐ ಸಭೆ: ರೋಹಿತ್-ಕೊಹ್ಲಿ ಭವಿಷ್ಯ ನಿರ್ಧಾರ? 10ನೇ ತರಗತಿಯ 80 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಿನ್ಸಿಪಾಲ್! ವಿಜಯ್ ಹಜಾರೆ ಟ್ರೋಫಿ: ರೋಚಕ ಜಯ ಸಾಧಿಸಿ ಕರ್ನಾಟಕ ಸೆಮೀಸ್ ಗೆ ಲಗ್ಗೆ ಕೆಎಲ್ ರಾಹುಲ್ ರಜೆ ಮನವಿ ತಿರಸ್ಕರಿಸಿದ ಬಿಸಿಸಿಐ: ಇಂಗ್ಲೆಂಡ್ ಸರಣಿಗೆ ಸಜ್ಜಾಗಲು ಸೂಚನೆ RCB ನಾಯಕನಾಗಿ ಕೊಹ್ಲಿ ಡೌಟ್, ಹೊಸ ನಾಯಕನ ಹುಡುಕಾಟದಲ್ಲಿ ಆರ್ ಸಿಬಿ! 2025ರಲ್ಲಿ ಕುಸಿಯಲಿದೆ ಭಾರತದ ಆರ್ಥಿಕತೆ: ಐಎಂಎಫ್ ಎಚ್ಚರಿಕೆ ಮಹಾರಾಷ್ಟ್ರ ಪಂಚಾಯಿತಿ ಚುನಾವಣೆ: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು? ದಿಲ್ಲಿ ಮದ್ಯ ನೀತಿಯಿಂದ 2,026 ಕೋಟಿ ಸರ್ಕಾರಕ್ಕೆ ನಷ್ಟ: ಸಿಎಜಿ ವರದಿ ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ ಜಾತಿ- ಧರ್ಮದ ಬೇಲಿ ಇಲ್ಲದ ಕಂಬಳ ಕ್ರೀಡೆ, ಕಲೆ ಸರ್ವರ ಸಂಭ್ರಮ: ಸಿಎಂ ಸಿದ್ದರಾಮಯ್ಯ