Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ವಿದೇಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು 22 ಸಾವಿರ ಎಕರೆ ಪ್ರದೇಶ ಭಸ್ಮ, 16ಕ್ಕೆ ಏರಿದ ಸಾವಿನ ಸಂಖ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 4 ವೀಕ್ಷಣೆಗಳು
Los Angeles Wildfire
Los Angeles Wildfire

ಅಮೆರಿಕ ಇತಿಹಾಸದಲ್ಲೇ ಕಂಡು ಕೇಳರಿಯದ ಲಾಸ್ ಏಂಜಲೀಸ್ ಕಾಡ್ಗಿಚ್ಚು ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಾಯಕಾರಿ ಆಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಲಾಸ್ ಏಂಜಲೀಸ್ ನಲ್ಲಿ ಕಳೆದ ಒಂದು ವಾರದಿಂದ ವ್ಯಾಪಿಸುತ್ತಿರುವ ಕಾಡ್ಗಿಚ್ಚಿನಿಂದ 22,600 ಎಕರೆ ಪ್ರದೇಶ ಆಹುತಿ ಪಡೆದಿದ್ದು, 12 ಸಾವಿರಕ್ಕೂ ಅಧಿಕ ಕಟ್ಟಡಗಳು ಹಾನಿ ಅಥವಾ ಸಂಪೂರ್ಣ ಧ್ವಂಸಗೊಂಡಿವೆ. ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಇದುವರೆಗೂ ಆಗಿರುವ ಅನಾಹುತ ಕೇವಲ ಶೇ.11ರಷ್ಟು ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಳಿ 120 ಕಿ.ಮೀ. ವೇಗದಲ್ಲಿ ಬೀಸುತ್ತಿರುವುದರಿಂದ ಕಾಡ್ಗಿಚ್ಚು ನಿಯಂತ್ರಿಸಲು ಆಗುತ್ತಿಲ್ಲ. ಬದಲಾಗಿ ಮತ್ತಷ್ಟು ವೇಗವಾಗಿ ಹರಡುತ್ತಿದೆ. ಇದರಿಂದ ಶೀಘ್ರದಲ್ಲೇ ಶೇ.15ರಷ್ಟು ಹೆಚ್ಚಿನ ಪ್ರದೇಶವನ್ನು ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕಾಡ್ಗಿಚ್ಚಿನಿಂದ ಲಾಸ್ ಏಂಜಲೀಸ್ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬಿಡೈನ್ ಹೇಳಿದ್ದಾರೆ. ಅಲ್ಲದೇ ದುರಂತದ ನಡುವೆಯೂ ಲಾಭ ಪಡೆಯಲು ದರೋಡೆಗಳು ನಡೆಯುತ್ತಿದ್ದು, ಇದು ದೊಡ್ಡ ತಲೆನೋವಾಗಿದೆ. ಈ ಸಂಬಂಧ ಇದುವರೆಗೆ 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

ಲಾಸ್ ಏಂಜಲೀಸ್ ನಂತರ ಇತರೆ ರಾಜ್ಯಗಳಿಗೂ ಕಾಡ್ಗಿಚ್ಚು ಹಬ್ಬುವ ಭೀತಿ ಇದ್ದು, ಕ್ಯಾಲಿಫೋರ್ನಿಯಾದ ಗವರ್ನರ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದು, ನಾಗರಿಕರು ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಕರೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment