Friday, September 11, 2026
Google search engine
Homeರಾಜ್ಯಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾರು

ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು  ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರ್ ಮುಂಭಾಗ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ೆಳಗಿನ ಜಾವ 5 ಗಂಟೆಗೆ ಅಪಘಾತ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments