Home ಬೆಂಗಳೂರು ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು.

by Editor
0 comments
hd kumarswamy

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು.

2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ.

ತಮ್ಮ ಕುಟುಂಬ ಸಮೇತವಾಗಿ ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿಕೊಳ್ಳಲು ಈ ಸಿಬ್ಬಂದಿ, ರಾಜ್ಯದ ಎಲ್ಲಾ ಭಾಗಗಳಿಂದ ಬಂದಿದ್ದರು ಹಾಗೂ ಹಬ್ಬದ ದಿನ ಕುಮಾರಸ್ವಾಮಿ ಅವರು ಎಲ್ಲಿರುತ್ತಾರೋ ಅಲ್ಲಿಗೆ ಬಂದು ತಮ್ಮ ಮಕ್ಕಳ ಜತೆ ಸೇರಿಕೊಂಡು ಹಬ್ಬ ಆಚರಿಸುತ್ತಾರೆ. ಕಳೆದ ಆರು ವರ್ಷಗಳಿಂದ ಅವರು ಇದನ್ನು ನಿರಂತರವಾಗಿ ಮುಂದುವರಿಸಿಕೊಂಡು ಬಂದಿದ್ದಾರೆ. ಈ ಹಬ್ಬಕ್ಕೆ ಉದ್ಯೋಗಿಗಳೆಲ್ಲ ಮಂಗಳವಾರ ಸಚಿವರ ಬೆಂಗಳೂರಿನ ಜೆ.ಪಿ.ನಗರದ ನಿವಾಸಕ್ಕೆ ಬಂದು ಹಬ್ಬ ಆಚರಿಸಿದರು.

ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ ಎಂದು ಭಾವುಕರಾದ ಸಚಿವರು:

banner

ಈ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಸಚಿವ ಕುಮಾರಸ್ವಾಮಿ ಅವರು; ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಋಣಿ ಆಗಿದ್ದೇನೆ. ನಿಮ್ಮ ಹೃದಯದಲಿ ಸ್ಥಾನ ಕೊಟ್ಟಿದ್ದಕ್ಕೆ ನಾನು ಆಭಾರಿ. ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ ಎಂದು ಭಾವುಕರಾದರು.

ಅವಕಾಶ ಸಿಕ್ಕಿದಾಗ ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ. ವಿಕಲಚೇತನರಿಗೆ ಸಾಧ್ಯವಾದಷ್ಟು ನೆರವು ಕೊಟ್ಟಿದ್ದೇನೆ. ಮುಂದೆಯೂ ದೈಹಿಕವಾಗಿ ಶಕ್ತಿ ಇಲ್ಲದ ಯಾರೇ ಇದ್ದರೂ ಅವರಿಗಾಗಿ ನನ್ನ ಹೃದಯ ಮಿಡಿಯುತ್ತದೆ. ಪ್ರಾಮಾಣಿಕವಾಗಿ ಅಂತಹವರ ಒಳಿತಿಗಾಗಿ ಪ್ರಯತ್ನ ಮಾಡುತ್ತೇನೆ ಎಂದರು ಅವರು.

ವಿಕಲಚೇತನರು, ದೈಹಿಕವಾಗಿ ಆಶಕ್ತರ ಬಗ್ಗೆ ನಮಗೆ ಅನುಕಂಪಕ್ಕಿಂತ ಮಿಗಿಲಾಗಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕೆಲಸ ಆಗಬೇಕಿದೆ. ನನಗೆ ಅವಕಾಶ ಸಿಕ್ಕಿದಾಗ ನಾನು ಇಂಥವರ ಪರವಾಗಿ ಕೆಲಸ ಮಾಡುತ್ತೇನೆ. ನನ್ನ ಪಾಲಿಗೆ ಇವರು ದೇವರ ಸಮಾನರು ಎಂದು ಸಚಿವರು ಹೇಳಿದರು.

ಸಮಾಜದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಕಷ್ಟದಲ್ಲಿ ಇದ್ದಾರೆ. ದೊಡ್ಡ ಪ್ರಮಾಣದಲ್ಲಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಮುಂದಿನ ಜನರು, ದೇವರು ಅವಕಾಶ ಕೊಡಬಹುದು ಎಂದು ನಂಬಿದ್ದೇನೆ. ನಿಮ್ಮ ಮಕ್ಕಳಿಗೆ ಶುಭವಾಗಲಿ, ಅವರನ್ನು ಚೆನ್ನಾಗಿ ಓದಿಸಿ ಎಂದು ಕಿವಿಮಾತು ಹೇಳಿದರು.

ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ:

ವಿಕಲಚೇತನರು, ದೈಹಿಕವಾಗಿ ಶಕ್ತಿ ಇಲ್ಲದವರು ಧೃತಿಗೆಡಬೇಡಿ. ಅಂಗವೈಕಲ್ಯ ಬಂತು ಎಂದು ಹೆದರಬೇಡಿ.. ದೇವರಿದ್ದಾನೆ, ನಿಮಗೂ ಅವಕಾಶ ಬಂದೆ ಬರುತ್ತದೆ, ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಇವತ್ತು ಭಾರತ ಯಾರೂ ಊಹೆ ಮಾಡದ ರೀತಿಯಲ್ಲಿ ಪ್ರಗತಿ ಹೊಂದುತ್ತಿದೆ. ಅವಕಾಶಗಳು ಹೆಚ್ಚುತ್ತಿವೆ, ಯಾರು ದೃತಿಗೆಡಬಾರದು. ಕಷ್ಟಗಳು ಬಂದರೆ ಧೈರ್ಯವಾಗಿ ಎದುರಿಸಿ, ಯಾವುದೇ ಸಮಸ್ಯೆ ಬಂದರೂ ಕೆಚ್ಚೆದೆಯಿಂದ ಎದುರಿಸಿ. ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ. ಕೌಟುಂಬಿಕವಾಗಿ ಒಳ್ಳೆಯ ಬಾಂಧವ್ಯ ರೂಢಿಸಿಕೊಳ್ಳಿ ಎಂದು ಸಚಿವರು ಹೇಳಿದರು.

ಸಮಾಜದಲ್ಲಿ ಕೆಟ್ಟ ವಾತಾವರಣ ಸೃಷ್ಟಿ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಸಚಿವರು; ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ನಡೆದಿದೆ. ಆ ದೃಶ್ಯವನ್ನು ನಾನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ನೋಡಿ ತೀವ್ರ ಆಘಾತಕ್ಕೆ ಒಳಗಾದೆ. ಮನಸ್ಸಿಗೆ ಬಹಳ ನೋವಾಯಿತು. ಇಂಥ ಪರಿಸಿತಿಯಿಂದ ಸಮಾಜವನ್ನು ಹೊರಕ್ಕೆ ತರಬೇಕಿದೆ.

ವಿಕಲಚೇತನರಿಗೆ ಹೆಚ್ಚು ಉದ್ಯೋಗಾವಕಾಶ ನೀಡಲು ಮನವಿ:

ಈ ಸಂದರ್ಭದಲ್ಲಿ ಸಚಿವ ಕುಮಾರಸ್ವಾಮಿ ಅವರಿಗೆ ಅಹವಾಲು ಸಲ್ಲಿಸಿದ ವಿಕಲಚೇತನ ಉದ್ಯೋಗಿಗಳು; ಇವತ್ತು ನಿಮಗೆ ಶುಭ ಕೋರಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದಿದ್ದೇವೆ. ಮುಂದಿನ ವರ್ಷ ದೇಶದ ಎಲ್ಲೆಡೆಯಿಂದ ಬಂದು ನಿಮಗೆ ಶುಭ ಕೋರುವಂತಾಗಬೇಕು. ತಾವು ಹೆಚ್ಚು ಪ್ರಮಾಣದಲ್ಲಿ ದೇಶಾದ್ಯಂತ ಇರುವ ಕೇಂದ್ರ ಸರಕಾರಿ ಸ್ವಾಮ್ಯದ ಕೈಗಾರಿಕೆಗಳಲ್ಲಿ ವಿಕಲಚೇತನರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಆರೋಗ್ಯ ವಿಮೆ ಮರು ಜಾರಿ ಮಾಡಿಸಿ:

ಪ್ರಧಾನಿ ನರೇಂದ್ರ ಮೋದಿ ಅವರು 2015ರಲ್ಲಿ ವಿಕಲಚೇತನರಿಗಾಗಿಯೇ ಸ್ವಾವಲಂಬನ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೆ ತಂದಿದ್ದರು. ಆ ಯೋಜನೆ ಈಗ ನಿಂತು ಹೋಗಿದೆ. ₹300 ಕೊಟ್ಟರೆ ನಮಗೆ ಅತ್ಯುತ್ತಮವಾದ ಆರೋಗ್ಯ ಸೌಲಭ್ಯ ದೊರೆಯುತ್ತಿತ್ತು. ಈ ಯೋಜನೆಯನ್ನು ಮತ್ತೆ ಆರಂಭ ಮಾಡಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು; ವಿಮಾ ಯೋಜನೆ ಮರು ಜಾರಿ ಮಾಡುವುದಕ್ಕೆ ಸಂಬಂಧಪಟ್ಟ ಸಚಿವರ ಗಮನ ಸೆಳೆಯುತ್ತೇನೆ ಎಂದು ಅವರು ಭರವಸೆ ನೀಡಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ನೌಕಾಪಡೆಗೆ ತ್ರಿಶಕ್ತಿ: 3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ! ಬಿಸಿಸಿಐನಿಂದ ಮೇಜರ್ ಸರ್ಜರಿ: ಆಟಕ್ಕೆ ತಕ್ಕಂತೆ ಆದಾಯ, ಸಂಗಾತಿ ಪ್ರವೇಶ ನಿರ್ಬಂಧ! 15 ದಿನಕ್ಕೊಮ್ಮೆ ಕ್ರೆಡಿಟ್ ಸ್ಕೋರ್ ನವೀಕರಣಕ್ಕೆ ಆರ್ ಬಿಐ ತಾಕಿತು! ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು! ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ !