ಸ್ನೇಹಿತರ ಜೊತೆ ಕುಳಿತು ಮಾತನಾಡುತ್ತಿದ್ದಾಗಲೇ 17 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ.
ಕೋರೇಶ್ ಸ್ನೇಹಿತರ ಜೊತೆ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಗೆಳೆಯ ಕೋರೇಶ್ನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಈತ ಪೋಷಕರಿಗೆ ಇದ್ದ ಒಬ್ಬನೇ ಮಗನಾಗಿದ್ದ.
ಇತ್ತೀಚೆಗೆ ಆರೋಗ್ಯವಾಗಿಯೇ ಇರುವ ಮೂರನೇ ತರಗತಿಯ ಮಕ್ಕಳಿಂದ ಹಿಡಿದು ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆಗಾಗ ವರದಿಯಾಗುತ್ತಿದೆ. ಇಂಥದ್ದೊಂದು ಗಂಭೀರ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಸರ್ಕಾರ ಆದ್ಯತೆಯ ಮೇಲೆ ಅಧ್ಯಯನ ಕೈಗೊಂಡು ಸೂಕ್ತ ಕ್ರಮ ವಹಿಸಬೇಕಿದೆ.