Home ರಾಜ್ಯ ಸಚಿವ ಕೃಷ್ಣ ಭೈರೇಗೌಡಗೆ ಸಂಕಷ್ಟ: ಕಂದಾಯ ಇಲಾಖೆ ಭ್ರಷ್ಟಾಚಾರ ತನಿಖೆಗೆ ರಾಜ್ಯಪಾಲರಿಗೆ ದೂರು!

ಸಚಿವ ಕೃಷ್ಣ ಭೈರೇಗೌಡಗೆ ಸಂಕಷ್ಟ: ಕಂದಾಯ ಇಲಾಖೆ ಭ್ರಷ್ಟಾಚಾರ ತನಿಖೆಗೆ ರಾಜ್ಯಪಾಲರಿಗೆ ದೂರು!

ಕಂದಾಯ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಅಶಿಸ್ತು ತೋರುತ್ತಿರುವ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ತನಿಖೆ ನಡೆಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

by Editor
0 comments
krishna bhiraegowda

ಕಂದಾಯ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಅಶಿಸ್ತು ತೋರುತ್ತಿರುವ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ತನಿಖೆ ನಡೆಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ಆಧರಿಸಿ ತನಿಖೆಗೆ ಆದೇಶಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೆ ಬುಧವಾರ ಮತ್ತೊಬ್ಬ ಸಚಿವರ ವಿರುದ್ಧ ಮತ್ತೊಂದು ದೂರು ಬಂದಿದ್ದು ಈ ಬಗ್ಗೆ ರಾಜ್ಯಪಾಲರ ತೀರ್ಮಾನ ಕಡೆ ದೃಷ್ಟಿ ನೆಟ್ಟಿದೆ.

ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಧಿಕಾರಶಾಹಿ ಆಶಿಸ್ತು ತೋರುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಸಚಿವ ಕೃಷ್ಣ ಭೈರೇಗೌಡ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೆ ಸಂಖ್ಯೆ: 150 ರಲ್ಲಿ ಚೆನ್ನ ವೀರಯ್ಯ ಎನ್ನುವವರಿಗೆ ಎರಡು ಎಕರೆ ಸಾಗುವಳಿದಾರರಿಗೆ ಸರ್ಕಾರಿ ಜಮೀನನ್ನು ಸಾಗುವಳಿ ಮತ್ತು ಹಂಗಾಮಿ ಸಾಗುವಳಿ ಚೀಟಿಯನ್ನು ಮಂಜೂರು ಮಾಡಲಾಗಿದೆ.

banner

ಜಮೀನು ವ್ಯವಹಾರ ನಡೆದಿದ್ದು, ಸರ್ವೆ ನಂಬರ್ 150ರಲ್ಲಿರುವ ಜಮೀನು ಪೋಡಿ, ನಕ್ಷೆ ಆಗದೇ ಸಾಗುವಳಿದಾರರು ಅಕ್ರಮವಾಗಿ ಜಮೀನನ್ನು ಪಲ್ಟಿತ್ ಡೆವಲಪರ್ಸ್ ಎಲ್ಎಲ್ಪಿ ಕಂಪನಿಗೆ ಮಾರಾಟ ಮಾಡಿರುವುದಾಗಿ ಆರೋಪಿಸಿದ್ದಾರೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಪೋಡಿ, ದುರಸ್ತಿ ಮಾಡದೇ ತಹಶೀಲ್ದಾರ್, ಉಪ‌ವಿಭಾಗಾಧಿಕಾರಿಗಳು ಪಲ್ಟಿತ್ ಡೆವಲಪರ್ಸ್ ಜೊತೆಗೆ ನೇರವಾಗಿ ಭಾಗಿಯಾಗಿ ಭ್ರಷ್ಟಾಚಾರ ಎಸಗಿರುವ ಇವರ ವಿರುದ್ಧ ಕೂಡ ಕಾನೂನು ಕ್ರಮಕೈಗೊಂಡು ಸರ್ಕಾರಿ ಜಮೀನನ್ನು ರಕ್ಷಿಸಬೇಕಿದೆ.

ಪ್ರಕರಣದಲ್ಲಿ ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದರೆ ಹುಲಿಕುಂಟೆ ಗ್ರಾಮದ ಮೇಲ್ಕಂಡ ಸರ್ವೆ ನಂಬರ್ ಜಮೀನುಗಳು ಸರ್ಕಾರಿ ಗೋಮಾಳ ಆಗಿದ್ದು, ಈ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಗರಣಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ದಿನೇಶ್ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕರ್ನಾಟಕದ ತಿರುಪತಿ ಭಕ್ತಿಗೆ ಸಿಹಿಸುದ್ದಿ: ತಿರುಮಲದಲ್ಲಿ 200 ಕೋಟಿ ವೆಚ್ಚದಲ್ಲಿ 3 ವಸತಿ ಸಂಕೀರ್ಣ ನಿರ್ಮಾಣ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಗೆ ಒಲಿದ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ! 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆಜೆ ಜಾರ್ಜ್ Belagavi: ಮಕ್ಕಳು ಜಗಳ ಆಡುತ್ತವೆ ಅಂತ 7 ವರ್ಷದ ಬಾಲಕನ ಮಾರಿದ ಮಲತಂದೆ ಸೇರಿ ನಾಲ್ವರು ಬಂಧನ Mysore: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ-ಮಗ ಅರೆಸ್ಟ್ ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ: ಸಚಿವ ಕೆಜೆ ಜಾರ್ಜ್ 34 ಎಸೆತದಲ್ಲಿ 79 ರನ್ ಚಚ್ಚಿದ ಅಭಿಷೇಕ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ ದೆಹಲಿ ಗಣರಾಜ್ಯೋತ್ಸವದಲ್ಲಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಲಕ್ಕುಂಡಿ ಅನಾವರಣ! ಇ-ಸೇವೆಯಲ್ಲಿ ಕರ್ನಾಟಕ ನಂ.1: ರಾಷ್ಟ್ರೀಯ ಆಡಳಿತ ಸೇವಾ ಮೌಲ್ಯಮಾಪನ ವರದಿ BIG BREAKING ಪುಷ್ಪಕ್ ಎಕ್ಸ್ ಪ್ರೆಸ್ ನಲ್ಲಿ ಅಗ್ನಿ ದುರಂತ ವದಂತಿ: ಹಲವರ ಸಾವು