ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.
ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.
ಮುಡಾ ಪ್ರಕರಣದಲ್ಲಿ 300 ಕೋಟಿ ರೂ. ಮೌಲ್ಯದ ಅಕ್ರಮ ಪತ್ತೆ ಆಗಿರುವುದಾಗಿ ಇಡಿ ಶುಕ್ರವಾರ ಪ್ರಕರಣೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಪತ್ನಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.



