Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಸೈಫ್ ಅಲಿ ಖಾನ್ ಗೆ ಇರಿದಿದ್ದ ಆರೋಪಿ ಬಾಂಗ್ಲಾದೇಶ ಪ್ರಜೆ: 70 ಗಂಟೆಗಳಲ್ಲಿ ಬಂಧಿಸಿದ ಪೊಲೀಸರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
saif ali khan
saif ali khan

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕು ಇರಿದಿದ್ದ ಆರೋಪಿಯನ್ನು ಮುಂಬೈ ಪೊಲೀಸರು 70 ಗಂಟೆಗಳಲ್ಲಿ ಬಂಧಿಸಿದ್ದು, 5 ತಿಂಗಳ ಹಿಂದೆಯಷ್ಟೇ ಮುಂಬೈಗೆ ಬಂದಿದ್ದ ಬಾಂಗ್ಲಾದೇಶೀ ಪ್ರಜೆ ಎಂಬ ಆಘಾತಕಾರಿ ಸುದ್ದಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಸೈಫ್ ಅಲಿ ಖಾನ್ ಮನೆಯಿಂದ 35 ಕಿ.ಮೀ. ದೂರದ ಥಾಣೆಯ ಕಾಸರವಡಳ್ಳಿಯ ಹಿರಾನಂದನಿ ಎಸ್ಟೇಟ್ ಬಳಿ ಭಾನುವಾರ ಮುಂಜಾನೆ ಆರೋಪಿಯನ್ನು ಬಂಧಿಸಲಾಗಿದ್ದು, 30 ವರ್ಷದ ಮೊಹಮದ್ ಶರಿಫುಲ್ ಇಸ್ಲಾಮ್ ಶಹಜಾದ್ ಮೂಲತಃ ಬಾಂಗ್ಲಾದೇಶಿ ಪ್ರಜೆಯಾಗಿದ್ದಾನೆ.

ಆರೋಪಿ ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸಕ್ಕೆ ನುಗ್ಗಿದ್ದ. ಈ ವೇಳೆ ಸೈಫ್ ಅಲಿ ಖಾನ್ ಅವರಿಗೆ 6 ಬಾರಿ ಚಾಕು ಇರಿದಿದ್ದು, ಸೈಫ್ ಅಲಿ ಖಾನ್ ಕುತ್ತಿಗೆ ಮತ್ತು ಸ್ಪೈನ್ ಕಡೆ ಗಂಭೀರವಾಗಿದ್ದು, ಶಸ್ತ್ರಚಿಕತ್ಸೆ ನಂತರ ಚೇತರಿಸಿಕೊಂಡಿದ್ದಾರೆ.

ಆರೋಪಿ ಬಳಿ ಯಾವುದೇ ಭಾರತೀಯ ದಾಖಲೆಗಳು ಪತ್ತೆಯಾಗಿಲ್ಲ. ಕೆಲವು ದಾಖಲೆಗಳು ಪತ್ತೆಯಾಗಿದ್ದು, ಅವು ಬಾಂಗ್ಲಾದೇಶಿ ಪ್ರಜೆ ಎಂಬುದು ತಿಳಿಯುತ್ತಿದೆ. ಪ್ರಾಥಮಿಕ ತನಿಖೆ ಕೂಡ ಆರಂಭವಾಗಿಲ್ಲ ಎಂದು ಪೊಲೀಸರು ವಿವರಿಸಿದ್ದಾರೆ.

ಬಾಂಗ್ಲಾದೇಶದಿಂದ 5 ತಿಂಗಳ ಹಿಂದೆ ಬಂದು ಮುಂಬೈನಲ್ಲಿ ವಾಸವಾಗಿದ್ದು, ಬಿಜೊಯ್ ದಾಸ್ ಎಂಬ ಸುಳ್ಳು ಹೆಸರಿನಿಂದ ಮನೆಕೆಲಸದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment