ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾನುವಾರ ಶಿಬಿರದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಹಲವು ಶಿಬಿರಗಳಿಗೆ ವ್ಯಾಪಿಸಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಶಿಬಿರಗಳಲ್ಲಿ ತಂಗಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆ ತರಲಾಗಿದೆ.
ಬೆಂಕಿ ವ್ಯಾಪಿಸುತ್ತಿರುವುದರಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. 12ಕ್ಕೂ ಹೆಚ್ಚು ಶಿಬಿರಗಳಿಗೆ ಬೆಂಕಿ ಆವರಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಹಾಕುಂಭ ಮೇಳದ ಸೆಕ್ಟೆರ್ 19ರ ಶಿಬಿರದಲ್ಲಿ 2 ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಯಾವುದೇ ಅನಾಹುತ ಸಂಭಿವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಘಟನಾ ಸ್ಥಳಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.