Home ಜಿಲ್ಲಾ ಸುದ್ದಿ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ

ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ

ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್‌ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮ ಆಯ್ಕೆ ಮಾಡಲಾಗಿದೆ.

by Editor
0 comments
hd kumarswamy

ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್‌ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮ ಆಯ್ಕೆ ಮಾಡಲಾಗಿದೆ.

ಗಂಜಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೂವನಹಳ್ಳಿ ಗ್ರಾಮವನ್ನು ಪಿಎಂ ಜನ್ ಮನ್ ಯೋಜನೆಗೆ ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಈ ಯೋಜನೆಯನ್ನು ಘೋಷಿಸಿ ಬುಡಕಟ್ಟು ಸಮುದಾಯದ ಜನರು ವಾಸವಿರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಣೆ ಮಾಡಿದ್ದರು ಎಂದರು.

79,000 ಕೋಟಿಗಳ ಈ ಬೃಹತ್ ಯೋಜನೆಯ ಮೂಲಕ ದೇಶದ 63,000 ಹಳ್ಳಿಗಳನ್ನು ಆಮೂಲಾಗ್ರವಾಗಿ ಅಭಿವೃದ್ದಿ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿದಂತೆ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮಗಳನ್ನು 18 ಇಲಾಖೆಗಳು ಅನುಷ್ಠಾನಕ್ಕೆ ತರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಪಿಆರ್‌ಡಿಐ ಮೂಲಕ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜತೆಗೆ ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದಿವಾಸಿಗಳ ಗುಡಿ ಕೈಗಾರಿಕೆಗಳ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

banner

ಈ ಯೋಜನೆಗೆ ಯಾವುದೇ ಗ್ರಾಮವನ್ನು ಯಾಕೆ ಮಾಡಬೇಕಾದರೆ ಹಲವಾರು ಮಾನದಂಡಗಳನ್ನು ಬುಡಕಟ್ಟು ಸಚಿವಾಲಯ ನಿಗದಿ ಮಾಡಿದೆ. ಆ ಮಾನದಂಡಕ್ಕೆ ಅನುಗುಣವಾಗಿ ಗ್ರಾಮಗಳನ್ನು ಆಯ್ಕೆ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನವಾಗಿ ಮಾನದಂಡಗಳ ಅನುಗುಣವಾಗಿ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಆಗಿದ್ದು, ಅತ್ಯಂತ ಬದ್ಧತೆಯಿಂದ ಅನುಷ್ಠಾನ ಮಾಡಲಾಗುತ್ತಿದೆ. ಮೊದಲಿಗೆ ಪೂವನಹಳ್ಳಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಸಚಿವರು ಹೇಳಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಗಣರಾಜ್ಯೋತ್ಸವ ದಿನ ಜೀ ಟಿವಿಯಲ್ಲಿ ಭೈರತ್ ರಣಗಲ್ ಪ್ರಸಾರ ಅಮ್ಮ- ಮಗಳ ಬಾಂಧವ್ಯದ ಮೇಲೆ ಸೇಡಿನ ಕಾಡ್ಗಿಚ್ಚು; ಬರ್ತಿದೆ ಹೊಸ ಧಾರಾವಾಹಿ 'ನಾ ನಿನ್ನ ಬಿಡಲಾರೆ' ! ಬಾಹ್ಯಕಾಶದಿಂದ ಮಹಾಕುಂಭ ಮೇಳ ಹೇಗೆ ಕಾಣುತ್ತೆ ಗೊತ್ತಾ? ಉಪಗ್ರಹ ಚಿತ್ರ ಬಿಡುಗಡೆ ಸೌಹಾರ್ದ ಬ್ಯಾಂಕ್ ದುಡ್ಡು ಏನು ಮಾಡಿದೆ ಅಂತ ಗೊತ್ತು: ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು ನನ್ನ ಮೇಲೆ ಕ್ರಮ ಕೈಗೊಳ್ಳಲು ನಾಯಕರಿಗೆ ಧಮ್ ಬೇಕು: ಜಿಟಿ ದೇವೇಗೌಡ ಸವಾಲು Police News ಮಗನ ಮುಂದೆಯೇ ಪೆಟ್ರೋಲ್ ಸುರಿದು ಪತ್ನಿಗೆ ಬೆಂಕಿ ಹಚ್ಚಿದ ಪತಿ! ಯಲ್ಲಾಪುರದಲ್ಲಿ ಭೀಕರ ಅಪಘಾತ: ಲಾರಿ ಪಲ್ಟಿಯಾಗಿ ಸಂತೆಗೆ ಹೋಗುತ್ತಿದ್ದ 10 ಮಂದಿ ದುರ್ಮರಣ ಇಂಗ್ಲೆಂಡ್- ಭಾರತ ಮೊದಲ ಟಿ-20 ಇಂದು: `ಸೂರ್ಯ’ನ ಮೆರಗು ಸಿಗುವುದೇ? ಕಾರ್ಲೊಸ್ 50ನೇ ಬಾರಿ ಸೆಮಿಫೈನಲ್ ಪ್ರವೇಶಿಸಿದ ನೊವಾಕ್ ಜೊಕೊವಿಕ್! ಬಾಲ್ಕನಿಯಿಂದ 2 ಮಕ್ಕಳನ್ನು ಎಸೆದು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ!