Thursday, November 21, 2024
Google search engine
Homeತಾಜಾ ಸುದ್ದಿಬೆಂಗಳೂರಿನಲ್ಲಿ ದಾಖಲೆಯ 41.8 ಡಿಗ್ರಿ ಉಷ್ಣಾಂಶ ದಾಖಲು: 22 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ದಾಖಲೆಯ 41.8 ಡಿಗ್ರಿ ಉಷ್ಣಾಂಶ ದಾಖಲು: 22 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಒಂದು ಕಾಲದಲ್ಲಿ ಹವಾನಿಯಂತ್ರಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ಮಂಗಳವಾರ ಒಂದೇ ದಿನ ನಗರದಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ಹೊಸ ದಾಖಲೆ ಬರೆದಿದೆ.

ಹೌದು, ಕೇಂದ್ರ ಹವಾಮಾನ ಇಲಾಖೆ ಬೀದರ್, ಕಲಬುರಗಿ, ವಿಜಯವಾಡ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ್, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 5ರವರೆಗೆ ಬಿಸಿಗಾಳಿ ಬೀಸಲಿದೆ ಎಂದು ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42,.8 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಅತೀ ಹೆಚ್ಚು 41.8 ಡಿಗ್ರಿ ಉಷ್ಣಾಂಶ ದಾಖಲಾಗಿದ್ದರೆ, ಬೀದರಹಳ್ಳಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಲವು ದಿನಗಳ ಕಾಲ ಬೆಂಗಳೂರಿನಲ್ಲಿ 40 ಡಿಗ್ರಿಗಿಂತ ಹೆಚ್ಚು ಉಷ್ಣಾಂಶ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಸಾಧಾರಣವಾಗಿ ಕನಿಷ್ಠ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಎಚ್‍ಎಎಲ್ ವಿಮಾನ ನಿಲ್ದಾಣದ ಬಳಿ 37.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 40.1 ಡಿಗ್ರಿ, ಲಾಲ್ ಬಾಗ್ ನಲ್ಲಿ 40.5 ಡಿಗ್ರಿ, ಯಲಹಂಕದಲ್ಲಿ 40.8, ತಾವರೆಕೆರೆಯಲ್ಲಿ 40.3 ಡಿಗ್ರಿ, ಉತ್ತರಹಳ್ಳಿಯಲ್ಲಿ 39.9 ಡಿಗ್ರಿ ಉಷ್ಣಾಂಶ ದಾಖಲಾಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments