ತೈವಾನ್ ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ ಪ್ರಬಲ 6.4 ತೀವ್ರತೆಯ ಭೂಕಂಪನ ಸಂಭವಿಸಿದೆ.
ಚಿಯಾಯಿ ನಗರದ ದಾಪು ಪಟ್ಟಣದಲ್ಲಿ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪನದಿಂದ ಸಣ್ಣಪುಟ್ಟ ಹಾನಿ ಸಂಭವಿಸಿದ್ದು, ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಆವಶೇಷಗಳಡಿ ಸಿಲುಕಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಕಳೆದ ಏಪ್ರಿಲ್ ನಲ್ಲಿ ಸಂಭವಿಸಿದ 7.2 ತೀವ್ರತೆಯ ಭೂಕಂಪನದಲ್ಲಿ ಮೂವರು ಮೃತಪಟ್ಟಿದ್ದರು. 2016ರಲ್ಲಿ ಸಂಭವಿಸಿದ 7.3 ತೀವ್ರತೆಯ ಭೂಕಂಪನದಲ್ಲಿ 100ಕ್ಕೂ ಹೆಚ್ಚು ಮಂದಿ ಅಸುನೀಗಿದ್ದರೆ, 1999ರಲ್ಲಿ ಭೂಕಂಪನದಲ್ಲಿ 2000 ಮಂದಿ ಅಸುನೀಗಿದ್ದರು.