ನಟ ದರ್ಶನ್ ಗೆ ನೀಡಲಾಗಿದ್ದ ಗನ್ ಲೈಸೆನ್ಸ್ ರದ್ದು ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ದರ್ಶನ್ ಗೆ ನೀಡಲಾಗಿದ್ದ ಗನ್ ಲೈಸೆನ್ಸ್ ಕುರಿತು ನೋಟಿಸ್ ನೀಡಲಾಗಿತ್ತು ಎಂದರು.
ಗನ್ ಲೈಸೆನ್ಸ್ ಕುರಿತು ಆರೋಪಿ ದರ್ಶನ್ ಉತ್ತರ ನೀಡಿದ್ದು, ಗನ್ ಲೈಸೆನ್ಸ್ ಮುಂದುವರಿಸುವಂತೆ ಮನವಿ ಮಾಡಿದ್ದರು. ಆದರೆ ಅವರ ತಾತ್ಕಾಲಿಕವಾಗಿ ಗನ್ ಲೈಸೆನ್ಸ್ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.
ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಪ್ರಕರಣದಲ್ಲಿ ದರ್ಶನ್ ಆರೋಪಿ ಆಗಿರುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಅವರ ಗನ್ ವಶಕ್ಕೆ ಪಡೆಯಲಾಗುವುದು. ರೇಣುಕಾಸ್ವಾಮಿ ಕೊಲೆ ಕೇಸ್ನಟಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ಮುಗಿಯುವವರೆಗೂ ತಾತ್ಕಾಲಿಕವಾಗಿ ಗನ್ ಲೈಸೆನ್ಸ್ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದರು.
ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರುವುದರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್ ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ನೋಟಿಸ್ ನಲ್ಲಿ ವಿವರಿಸಲಾಗಿತ್ತು.