Thursday, July 2, 2026
Google search engine
Homeದೇಶ1 ಕೋಟಿ ರೂ. ಬಹುಮಾನ ಘೋಷಿಸಿದ್ದ ನಾಯಕ ಸೇರಿ 20 ನಕ್ಸಲರ ಎನ್ ಕೌಂಟರ್!

1 ಕೋಟಿ ರೂ. ಬಹುಮಾನ ಘೋಷಿಸಿದ್ದ ನಾಯಕ ಸೇರಿ 20 ನಕ್ಸಲರ ಎನ್ ಕೌಂಟರ್!

ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಿದ್ದ ನಾಯಕ ಸೇರಿದಂತೆ 20 ನಕ್ಸಲರನ್ನು ಒಡಿಶಾ ಮತ್ತು ಛತ್ತೀಸಗಢ ಗಡಿಯಲ್ಲಿ ಸಿಆರ್ ಪಿಎಫ್ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಎನ್ ಕೌಂಟರ್ ಮಾಡಿದ್ದಾರೆ.

ಒಡಿಶಾ ಮತ್ತು ಛತ್ತೀಸಗಢ ಗಡಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 20 ನಕ್ಸಲರು ಮೃತಪಟ್ಟಿದ್ದಾರೆ. ಇದರಲ್ಲಿ ಸರ್ಕಾರ 1ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದ್ದ ಆಂಧ್ರಪ್ರದೇಶ ಮೂಲದ ಚಲಪತಿ ಎಂದೇ ಖ್ಯಾತರಾದ ನಕ್ಸಲ್ ಹಿರಿಯ ನಾಯಕ ಜಯರಾಮ್ ರೆಡ್ಡಿ ಕೂಡ ಸೇರಿದ್ದಾರೆ.

ಒಡಿಶಾದ ನುಪಾಡ ಜಿಲ್ಲೆ ಮತ್ತು ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ನಡುವೆ ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಇಬ್ಬರು ಮಹಿಳಾ ನಕಲ್ಸರು ಶರಣಾದ ಬೆನ್ನಲ್ಲೇ ಸಿಆರ್ ಪಿಎಫ್ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಕ್ಸಲರ ಾಡ ಪತ್ತೆಹಚ್ಚಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ನಕ್ಸಲರು ದಟ್ಟ ಅರಣ್ಯದಲ್ಲಿ ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಾಗೂ ಸ್ಥಳೀಯ ಮಾಹಿತಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು, 12 ಮಂದಿ ನಕ್ಸಲರು ಹತ್ಯೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹತ್ಯೆಯಾದ ನಕ್ಸಲರ ಬಳಿ ಸ್ವಯಂ ಚಾಲಿತ ಗನ್, ಐಇಡಿ ಬಾಂಬ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ನಕ್ಸಲರ ವಿರುದ್ಧದ ಕಾರ್ಯಾಚರಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಸ ವ್ಯಕ್ತಪಡಿಸಿದ್ದು, ಇದು ಅತ್ಯಂತ ಯಶಸ್ವಿ ಕಾರ್ಯಾಚರಣೆ ಆಗಿದ್ದು, ನಕ್ಸಲರ ಗುಂಪು ಧ್ವಂಸ ಮಾಡಲಾಗಿದೆ ಎಂದು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನು ಪ್ರಶಂಸಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments