13
ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಸೈಫ್ ಅಲಿ ಖಾನ್ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಚಾಕು ಇರಿತದಿಂದ ಕಳೆದ 6 ದಿನಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.