24 ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ವಿಜೇತ ಸರ್ಬಿಯಾದ ನೊವಾಕ್ ಜೊಕೊವಿಕ್ 3ನೇ ಶ್ರೇಯಾಂಕಿತ ಕಾರ್ಲೊಸ್ ಅಲ್ಕರೆಜ್ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
11ನೇ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ನೊವಾಕ್ ಜೊಕೊವಿಕ್ ಮೆಲ್ಬೋರ್ನ್ ಕೋರ್ಟ್ ನಲ್ಲಿ ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ನಲ್ಲಿ 4-6, 6-4, 6-3, 6-4 ಸೆಟ್ ಗಳಿಂದ ಅಲ್ಕರೇಜ್ ಅವರನ್ನು ಮಣಿಸಿದರು.
3 ಗಂಟೆ 37 ನಿಮಿಷಗಳ ಹೋರಾಟದಲ್ಲಿ ಜಯ ಸಾಧಿಸಿದ ನೊವಾಕ್ 50ನೇ ಬಾರಿ ಗ್ರ್ಯಾನ್ ಸ್ಲಾಮ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ.