ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.
ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಮುಂಜಾನೆ 3.30ರ ಸುಮಾರಿಗೆ ಟಯರ್ ಸ್ಫೋಟಗೊಂಡ ಪರಿಣಾಮ ಲಾರಿ ಉರುಳಿಬಿದಿದೆ.
ಹಾವೇರಿಯ ಫಯಾಜ್ ಜಮಖಂಡಿ (45) ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಷೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24), ಮೃತಪಟ್ಟ ದುರ್ದೈವಿಗಳು.
ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಲಾರಿಯಲ್ಲಿ 37 ಮಂದಿ ಪ್ರಯಾಣಿಸುತ್ತಿದ್ದು, ಹಾವೇರಿ ಮೂಲದ 10 ಮಂದಿ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.