Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಜಿಲ್ಲಾ ಸುದ್ದಿ

ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆಯ 9 ಕಾರ್ಯಕರ್ತರು ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
ramasene
ramasene

ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ ರಾಮಸೇನೆಯ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಕಲರ್ಸ್ ಮಸಾಜ್ ಸೆಂಟರ್ ಮೇಲೆ ಗುರುವಾರ ಏಕಾಏಕಿ ನುಗ್ಗಿದ ರಾಮಸೇನೆಯ ಕಾರ್ಯಕರ್ತರು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು.

ದಾಳಿ ಪ್ರಕರಣದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ನಂತರ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ ೯ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿದ ರಾಮಸೇನೆ ಕಾರ್ಯಕರ್ತರು, ಪೀಠೋಪಕರಣಗಳನ್ನು ಹಾನಿ ಮಾಡಿದ್ದೂ ಅಲ್ಲದೇ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು.

ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಅಕ್ರಮ ಚಟುವಟಿಕೆ ನಡೆಯುತ್ತಿದ್ದರೆ ಪೊಲೀಸರಿಗೆ ದೂರು ನೀಡಬೇಕಿತ್ತು. ಆದರೆ ಏಕಾಏಕಿ ದಾಳಿ ಮಾಡಿ ನೈತಿಕ ಪೊಲೀಸ್ ಗಿರಿ ನಡೆಸುವುದು ಸರಿಯಲ್ಲ ಎಂದು  ಸಾರ್ಜಜನಿಕರು ಆಗ್ರಹಿಸಿದ್ದರು.

ಘಟನೆ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್, ಪ್ರಕರಣವನ್ನು ಪರಿಶೀಲಿಸಲಾಗುತ್ತಿದ್ದು, ರಾಮಸೇನೆ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment