Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
ksrtc bus accident
ksrtc bus accident

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆಯ  ಬಸ್ ಮರಕ್ಕೆ ಢಿಕ್ಕಿ  ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಕೈ, ಕಾಲು ಮುರಿದಿದೆ. ತೀವ್ರವಾಗಿ ಗಾಯಗೊಂಡವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸೇರಿಸಲಾಗಿದ್ದು, ಉಳಿದವರನ್ನು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೇಮಗಿರಿ ರಸ್ತೆಯಲ್ಲಿ ಆಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ ಆಗಮಿಸುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದ  ಮರಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಎಡಭಾಗ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಕಾರದಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಆರ್.ಪೇಟೆ ತಾಲೂಕಿನ ಹೇಮಗಿರಿ ನಾಟನಹಳ್ಳಿಯ ಪ್ರೇಕ್ಷಿತ (14), ಮಲ್ಲೇನಹಳ್ಳಿ ನಿಂಗಮ್ಮ(70), ಆಲೇನಹಳ್ಳಿ ಬಿಂದು (30), ನಾರ್ಗೋನಹಳ್ಳಿ ಶಿವಮ್ಮ(50), ಹೊನ್ನೇನಹಳ್ಳಿ ದೇವರಾಜು (40), ಮಡವಿನಕೋಡಿಯ ಕಿರಣ್ (38) ಗಾಯಗೊಂಡಿದ್ದಾರೆ.

ಎಚ್ ಡಿಕೆ ಆಘಾತ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಸಂಭವಿಸಿರುವ ರಾಜ್ಯ ಸಾರಿಗೆ ಬಸ್ ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿ ಇಪ್ಪತ್ತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತ ಉಂಟಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಪಡೆಯುತ್ತಿದ್ದಂತೆ ತಕ್ಷಣವೇ ಜಿಲ್ಲಾ ವೈದ್ಯಾಧಿಕಾರಿಗಳ ಜತೆ ಮಾತನಾಡಿ, ಸಮಗ್ರ ಮಾಹಿತಿ ಪಡೆದುಕೊಂಡಿದ್ದೇನೆ ಹಾಗೂ ಗಾಯಾಳುಗಳಿಗೆ ಅಗತ್ಯವಾದ, ಉಚಿತ, ಗುಣಮಟ್ಟದ ತುರ್ತುಚಿಕಿತ್ಸೆ ನೀಡಬೇಕು ಎಂದು ಸೂಚಿಸಿದ್ದೇನೆ. ಗಾಯಾಳುಗಳೆಲ್ಲರೂ ಆದ? ಶೀಘ್ರವಾಗಿ ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳಲಿ ಹಾರೈಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment