Sunday, June 28, 2026
Google search engine
Homeಜಿಲ್ಲಾ ಸುದ್ದಿಮೈಸೂರು ಘಟನೆ ಮರುಕಳಿಸದಂತೆ ತಪ್ಪಿತಸ್ಥರ ಮೇಲೆ ಮೂಲಾಜಿಲ್ಲದೇ ಕ್ರಮ: ಸಿಎಂ ಖಡಕ್ ಸೂಚನೆ

ಮೈಸೂರು ಘಟನೆ ಮರುಕಳಿಸದಂತೆ ತಪ್ಪಿತಸ್ಥರ ಮೇಲೆ ಮೂಲಾಜಿಲ್ಲದೇ ಕ್ರಮ: ಸಿಎಂ ಖಡಕ್ ಸೂಚನೆ

ಮೈಸೂರು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಂಧಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ. ತಪ್ಪಿತಸ್ಥರ ವಿರುದ್ಧ ಮೂಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮೈಸೂರು ಉದಯಗಿರಿ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಸಿಎಂ ಖಡಕ್ ಸೂಚನೆ ನೀಡಿದರು.

ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಅವರು ಸೂಚಿಸಿದರು.

ಅಮಾಯಕರಿಗೆ ತೊಂದರೆ ಕೊಡಬಾರದು. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಸಿಎಂ ಹೇಳಿದರು.

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಇದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಎಂದು ಅವರು ನುಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments